ಗ್ರಾಮ ಪಂಚಾಯತಿ ನೌಕರರಿಗೆ ಯಾವುದಾದರೂ ರೂಪದಲ್ಲಿ ಸಹಾಯ ಮಾಡುತ್ತೇವೆ:ಗೊಂದಲಕ್ಕೆ ತೆರೆ ಎಳೆದ ಸಚಿವ ಕೋಟ
ಗ್ರಾಮ ಪಂಚಾಯತ್ ನೌಕರರ ESI / PF ಹಾಗೂ ಸರ್ಕಾರಿ ಸಿಬ್ಬಂದಿ ಎಂದು ಪರಿಗಣಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಪರವಾಗಿ ವಿಧಾನ ಪರಿಷತ್ ನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಾತನಾಡಿದರು. ಆದರೆ ಅವರ ಮಾತನ್ನು ಕೆಲವರು ವಿವಾದವಾಗಿಸಿ ಅಪ ಪ್ರಚಾರ ಮಾಡಿದ್ದು ತಾವು ಸದನದಲ್ಲಿ ನೀಡಿದ್ದ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಗಳ ಪರವಾಗಿ ಮಾತನಾಡಿದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಯಾವುದಾದರೂ ರೂಪದಲ್ಲಿ ಸಿಬ್ಬಂದಿಯವರಿಗೆ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಕೆಲವೊಂದು ಆದೇಶಗಳು ನ್ಯಾಯಾಲಯಕ್ಕೆ ಹೋಗಿದ್ದರಿಂದ ಅಲ್ಲಿನ ವರದಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ಗ್ರಾಮ ಪಂಚಾಯತಿ ನೌಕರರ ಬಗ್ಗೆ ನಮ್ಮ ಸರ್ಕಾರ ಹಾಗೂ ವೈಯಕ್ತಿಕವಾಗಿ ನನಗೂ ಕಾಳಜಿ ಇದೆ ಎಂದು ಹೇಳಿದರು.
0 Comments