ಯುವ ಕೃಷಿಕ ನಾಗರಾಜ ಶೆಟ್ಟಿ ಅಂಬೂರಿಗೆ ಶ್ರೇಷ್ಠ ರೈತ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಮೂಡುಬಿದಿರೆಯ ಪ್ರಗತಿಪರ ಯುವ ಕೃಷಿಕ ಅಂಬೂರಿ ನಾಗರಾಜ ಶೆಟ್ಟಿಯವರಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಶ್ರೇಷ್ಠ ರೈತ ಪ್ರಶಸ್ತಿ’ಯನ್ನು ಶಿವಮೊಗ್ಗದಲ್ಲಿ ನಡೆದ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರದಾನಿಸಲಾಯಿತು.
ಆನಂದಪುರ ಶ್ರೀ ಮುರುಘ ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಗಳವರ ಉಪಸ್ಥಿತಿಯಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಆರ್. ಸಿ. ಜಗದೀಶ್, ಶಾಸಕ ಡಿ.ಎಸ್. ಸುರೇಶ್ ಮತ್ತಿತರರು ಪ್ರದಾನಗೈದರು.
0 Comments