ಮೋದಿ ಕಾರ್ಯಕ್ರಮ ಹತ್ತಿಕ್ಕಲು ಬಾಂಬ್ ಸ್ಫೋಟಕ್ಕೆ ತಯಾರಿ:ಬಂಟ್ವಾಳದಲ್ಲಿ ಶಂಕಿತರ ಮನೆಗೆ ಎನ್.ಐ.ಎ.ದಾಳಿ

ಜಾಹೀರಾತು/Advertisment
ಜಾಹೀರಾತು/Advertisment
ಮೋದಿ ಕಾರ್ಯಕ್ರಮ ಹತ್ತಿಕ್ಕಲು ಬಾಂಬ್ ಸ್ಫೋಟಕ್ಕೆ ತಯಾರಿ:ಬಂಟ್ವಾಳದಲ್ಲಿ ಶಂಕಿತರ ಮನೆಗೆ ಎನ್.ಐ.ಎ.ದಾಳಿ



ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾದಲ್ಲಿ ನಡೆದಿದ್ದ ಬೃಹತ್ ಜಾಥಾ ಕಾರ್ಯಕ್ರಮವನ್ನು ವಿಫಲಗೊಳಿಸಬೇಕೆಂಬ ನಿಟ್ಟಿನಲ್ಲಿ ಬಾಂಬ್ ಸ್ಪೋಟಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸಿದೆ. 

ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದಾರೆ ಎಂಬ ಆರೋಪದಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದ್ದು ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ಭಾನುವಾರ ರಾತ್ರಿ ವೇಳೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.

Post a Comment

0 Comments