2022-23 ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ವಿಕಲಚೇತನ ಫಲಾನುಭವಿಗಳಿಗೆ ಸಾಧನಾ ಸಲಕರಣ ವಿತರಣಾ ಕಾರ್ಯಕ್ರಮವನ್ನು
ಮುಲ್ಕಿ- ಮೂಡುಬಿದಿರೆ ಶಾಸಕರಾದ ಶ್ರೀ ಉಮಾನಾಥ ಎ. ಕೋಟ್ಯಾನ್ ಅವರ ನೇತೃತ್ವದಲ್ಲಿ ಮೂಡುಬಿದಿರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ದಿನಾಂಕ 24-03-2023 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ವಿವಿಧ ವಿಶೇಷ ಚೇತನರಾದ 14 ಫಲಾನುಭವಿಗಳಿಗೆ ದ್ವಿಚಕ್ರ ವಾಹನ, ವೀಲ್ ಚೆರ್ ಹಾಗೂ ಶ್ರವಣ ಸಾಧನಾವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ದಯಾವತಿ ಎಂ. ನೆಲ್ಲಿಕಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಶೀಲ, ತಾಲೂಕು ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯನಿರ್ವಾಹಕ ಅಧಿಕಾರಿ ದಯಾವತಿ ಎಂ ಸ್ವಾಗತಿಸಿ ಪಂಚಾಯತಿ ಸಿಬ್ಬಂದಿ ಪ್ರಶಾಂತ್ ಕುಮಾರ್ ಜೈನ್ ನೆಲ್ಲಿಕಾರು ಕಾರ್ಯಕ್ರಮ ನಿರೂಪಿಸಿದರು
0 Comments