ನಾನ್‌ಸೆನ್ಸ್ ತರ ವರ್ತಿಸಬೇಡಿ:ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಪರೋಕ್ಷ ಚಾಟಿ ಬೀಸಿದ ರಕ್ಷಿತ್ ಶೆಟ್ಟಿ.!
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಜಮೀನು ನೀಡಿದ್ದು ಮುಸ್ಲಿಂ ರಾಜರು ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿಕೆ ರಾದ್ಧಾಂತಕ್ಕೆ ಕಾರಣವಾಗಿದ್ದು ಇದೀಗ ಖ್ಯಾತ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಮಿಥುನ್ ರೈ ಯವರಿಗೆ ಪರೋಕ್ಷ ಚಾಟಿ ಬೀಸಿದ್ದಾರೆ.
ಸೋಷಿಯಲ್ ಮೀಡಿಯಾದ ತಮ್ಮ ಖಾತೆಯಲ್ಲಿ ರಕ್ಷಿತ್ ಶೆಟ್ಟಿ ಈ ವಿವಾದದ ಕುರಿತಂತೆ ಬರೆದುಕೊಂಡಿದ್ದು, ಮಿಥುನ್ ರೈ ಹೆಸರನ್ನು ಬಳಸದೇ ತರಾಟೆಗೆ ತಗೆದುಕೊಂಡಿದ್ದಾರೆ. ‘ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ, ಇವರಿಗೆ ಕೊಟ್ಟ ಪ್ರತಿಕ್ರಿಯೆ ಎನ್ನುವುದು ಸ್ಪಷ್ಟವಾಗುತ್ತದೆ.
0 Comments