Big breaking:ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಟಿಕೆಟ್ ಘೋಷಣೆ

ಜಾಹೀರಾತು/Advertisment
ಜಾಹೀರಾತು/Advertisment

 Big breaking:ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಟಿಕೆಟ್ ಘೋಷಣೆ





ಅತಿಹೆಚ್ಚು ಕುತೂಹಲ ಕೆರಳಿಸಿದ್ದ  ರಾಜ್ಯ ವಿಧಾನಸಭಾ ಚುನಾವಣೆಯ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ನಿರೀಕ್ಷೆಯಂತೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕರಾದ ಉಮನಾಥ್ ಕೋಟ್ಯಾನ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕ ಹರೀಶ್ ಪೂಂಜಾ,ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ರಾಜೇಶ್ ನಾಯ್ಕ್, ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕ ವೇದವ್ಯಾಸ ಕಾಮತ್,ಮಂಗಳೂರು ಉತ್ತರಕ್ಕೆ ಡಾ.ವೈ.ಭರತ್ ಶೆಟ್ಟಿ, ಸುಳ್ಯ ಭಾಗೀರತಿ, ಪುತ್ತೂರು ಆಶಾ ರವರಿಗೆ ಟಿಕೆಟ್ ಘೋಷಣೆಯಾಗಿದೆ.


ಉಡುಪಿ ಯಶ್ಪಾಲ್ ಸುವರ್ಣ, ಕಾಪು ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಕಿರಣ್ ಕೊಡ್ಗಿ, ಕಾರ್ಕಳ ಸುನಿಲ್ ಕುಮಾರ್.


ಹಲವಾರು ಕ್ಷೇತ್ರಗಳಲ್ಲಿ ಟಿಕೆಟ್ ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿ ಇದ್ದರೂ ಜೇನುಗೂಡಿಗೆ ಕೈ ಹಾಕುವ ಕೆಲಸವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮಾಡಿಲ್ಲ ಎಂಬುದು ಇಲ್ಲಿ ಸ್ಪಷ್ಟವಾಗಿ ಕಾಣಬಹುದು.


ಅನೇಕ ವಿಚಾರಗಳಲ್ಲಿ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಕೆಲಸವನ್ನು ಮಾಡಿದ್ದು ಜನ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಈ ಎಲ್ಲಾ ನಾಯಕರಿಗೆ ಮತ್ತೊಮ್ಮೆ ಪಕ್ಷ ಅವಕಾಶ ನೀಡಿದೆ.

Post a Comment

0 Comments