ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಥುನ್ ಸೋಮವಾರ ಬೆಳಗ್ಗೆ 10 ಗಂಟೆಗೆ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲ್ಲಿದ್ದಾರೆ. ಇದಕ್ಕೂ ಮೊದಲು ಅವರು ಸ್ವರಾಜ್ಯ ಮೈದಾನದಿಂದ ತಾಲೂಕು ಕಚೇರಿವರೆಗೆ ಕರ‍್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸ್ವರಾಜ್ಯ ಮೈದಾನದಲ್ಲಿ ಪಕ್ಷದ ಕರ‍್ಯಕರ್ತರ ಸಭೆ ನಡೆಸಲಿದ್ದಾರೆ.
ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ವಿಜಯನಾಥ ವಿಠಲ ಶೆಟ್ಟಿ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಎಸ್‌ಡಿಪಿಐ ಅಭ್ಯರ್ಥಿ ಆಲ್ಫೋನ್ಸ್ ಫ್ರಾಂಕೊ ಎಸ್‌ಡಿಪಿಐ ಕಚೇರಿಯಿಂದ ಕರ‍್ಯಕರ್ತರೊಂದಿಗೆ ಕಾಲ್ನಡಿಗೆ ಜಾಥಾದಲ್ಲಿ ಬಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
0 Comments