ನಿಧನ
ಡಿಜೆ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ ಶೆಟ್ಟಿ
ಮೂಡುಬಿದಿರೆ, ಎ.೧೨: ಶ್ರೀ ಮೂಡುಬಿದಿರೆ ದಿಗಂಬರ ಜೈನ ವಿದ್ಯಾವರ್ಧಕ ಸಂಘ ಪ್ರವರ್ತಿತ ಡಿಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧ್ಯಾಪಕ, ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದ ಕೊಂಡೆ ಬೀದಿ `ಜಿನಪ್ರಭಾ' ನಿವಾಸಿ ಪದ್ಮರಾಜ ಶೆಟ್ಟಿ (೯೪) ಎ.೧೧ರಂದು ಬೆಂಗಳೂರಿನಲ್ಲಿ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು. ಪತ್ನಿ, ಪುತ್ರಿಯನ್ನು ಅವರು ಅಗಲಿದ್ದಾರೆ.
ಬಂಗವಾಡಿ ಅರಸು ಮನೆತನದವರಾಗಿದ್ದ ಪದ್ಮರಾಜ ಶೆಟ್ಟಿ ಅವರು ಡಿ.ಜೆ.ವಿ.ವ. ಸಂಘದ ಆಡಳಿತ ಮಂಡಳಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಶ್ರೀ ಜೈನ ಮಠದ ವ್ಯವಸ್ಥಾಪಕ ಸಂಜಯಂತ ಕುಮಾರ್ ಶೆಟ್ಟಿ ಅವರ ಸಹೋದರರಾಗಿರುವ ಪದ್ಮರಾಜ ಶೆಟ್ಟಿ ಅವರ ನಿಧನಕ್ಕೆ ಮೂಡುಬಿದಿರೆ ಶ್ರೀ ಜೈನ ಮಠಾಧೀಶ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಸದ್ಗತಿ ಪ್ರಾರ್ಥನೆ ಸಲ್ಲಿಸಿದ್ದಾರೆ.
0 Comments