ಮಿಜಾರು ಅಲೇರು ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿದ ಕೋಟ್ಯಾನ್
ಮೂಡುಬಿದಿರೆ: ಮಿಜಾರಿನ ಶ್ರೀ ಸತ್ಯಸಾರಮಾಣಿ ಕಾನದ ಕಟದ ಮೂಲಸ್ಥಾನ ಶ್ರೀ ಕ್ಷೇತ್ರ ಅಲೇರಿ ಇಲ್ಲಿಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಎ. ಕೋಟ್ಯಾನ್ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಶ್ರೀ ಕ್ಷೇತ್ರದ ಜೀರ್ಣೋದ್ದಾರ ಕಾರ್ಯದ ವಿಚಾರದಲ್ಲಿ ಶಾಸಕರು ಹಸ್ತಕ್ಷೇಪ ಮಾಡಿದ್ದಾರೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದು ಹಾಗಾಗಿ, ಕ್ಷೇತ್ರದ ಕಾರಣಿಕ ಶಕ್ತಿಗಳಲ್ಲಿ ಈ ವಿಚಾರವಾಗಿ ಪ್ರಾರ್ಥನೆ ಸಲ್ಲಿಸಿ ತಪ್ಪಿತಸ್ಥರಿಗೆ ತಕ್ಕ ಶಾಸ್ತಿಯಾಗಬೇಕೆಂದು ಕೋಟ್ಯಾನ್ ಬೇಡಿಕೊಂಡರು
0 Comments