50 ಸಾವಿರ ಮತಗಳ ಅಂತರದಿಂದ ಕೋಟ್ಯಾನ್ ಗೆ ಜಯ: ಹಿಮಂತ್ ಬಿಸ್ವಾ ಶರ್ಮಾ ಭರವಸೆ

ಜಾಹೀರಾತು/Advertisment
ಜಾಹೀರಾತು/Advertisment

 50 ಸಾವಿರ ಮತಗಳ ಅಂತರದಿಂದ ಕೋಟ್ಯಾನ್ ಗೆ ಜಯ: ಹಿಮಂತ್ ಬಿಸ್ವಾ ಶರ್ಮಾ ಭರವಸೆ



ಮೂಡುಬಿದಿರೆ: ಕಳೆದ ಚುನಾವಣೆಯಲ್ಲಿ 30 ಸಾವಿರ ಮತಗಳ ಅಂತರದಿಂದ ಗೆದ್ದು ಮೂಡುಬಿದಿರೆಯನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿರುವ ಉಮಾನಾಥ ಕೋಟ್ಯಾನ್ ಅವರು ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆದ್ದು ವಿಜಯ ಪತಾಕೆಯನ್ನು ಹಾರಿಸುವುದು ಖಚಿತ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಪರ ಶಿರ್ತಾಡಿ ಪೇಟೆಯಲ್ಲಿ ಭಾನುವಾರ ಸಂಜೆ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದರು.



 ಮೂಲ್ಕಿ-ಮೂಡುಬಿದಿರೆ 

ಕಾಂಗ್ರೆಸ್ ಪಕ್ಷವು ಗ್ಯಾರಂಟಿಯ ಹುಸಿ ಭರವಸೆಯೊಂದಿಗೆ ರಾಜ್ಯದಲ್ಲಿ ಸುಳ್ಳಿನ‌ ಮನೆ ನಿರ್ಮಿಸಲು ಹೊರಟಿದೆ.ಮತದಾರರು ಗ್ಯಾರಂಟಿಯ ಆಮಿಷಕ್ಕೆ ಒಳಗಾಗಬೇಡಿ.ಅವರಿಗೆ ಅವಕಾಶವನ್ನು ಕೊಡಬೇಡಿ.ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯುವ ಬಿಜೆಪಿಯನ್ನು ಬೆಂಬಲಿಸಿ ಎಂದು ಅವರು ಮನವಿ ಮಾಡಿದರು.

ಹಿಮಾಚಲ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೀಡಿದ ಗ್ಯಾರಂಟಿಯನ್ನು ಈಡೇರಿಸಿಲ್ಲ.ಕರ್ನಾಟಕದಲ್ಲಿ ತನ್ನ ಬಗ್ಗೆಯೇ ಗ್ಯಾರಂಟಿ ಇಲ್ಲದ ಕಾಂಗ್ರೆಸ್ ಕರ್ನಾಟಕದ ಜನತೆಗೆ ಗ್ಯಾರಂಟಿಯ ಭರವಸೆ ನೀಡಿರುವುದು ದುರದೃಷ್ಟಕರ ಎಂದು  ಹೇಳಿದರು.

ಮೋದಿ ಅವರು ದೇಶವನ್ನು ಪ್ರಗತಿಯತ್ತ ಸಾಗಿಸಿ ನಂಬರ್ ವನ್ ಪಟ್ಟಕ್ಕೇರಿಸಲು ರಾತ್ರಿ ಹಗಲೆನ್ನದೆ ಶ್ರಮಿಸುತ್ತಿದ್ದಾರೆ. ಆದರೆ ಪ್ರತಿಪಕ್ಷಗಳು ದೇಶವನ್ನು ಹೇಗೆ ದುರ್ಬಲಗೊಳಿಸಬಹುದೆಂದು ಚಿಂತನೆಯಲ್ಲಿ ಮುಳುಗಿದೆ. ಫಿಎಫ್.ಐ ನ್ನು ಕಾಂಗ್ರೆಸ್ ತನ್ನ ಮಕ್ಕಳಂತೆ ಸಾಕುತ್ತಿದೆ. ಅದನ್ನು ಬೆಳೆಸುವುದರಲ್ಲಿಯೇ ದಿನ ಕಳೆಯುತ್ತಿದೆ.ಆದರೆ ದೇಶದ ಅಭಿವೃದ್ಧಿಗೆ ತೊಡಕಾಗಿರುವ ವಿದ್ವಾಂಸಕ ಕೃತ್ಯದಲ್ಲಿ ತೊಡಗಿರುವ 

ಫಿಎಫ್.ಐ ನ್ನು ಮೋದಿಯವರು ನಿಷೇಧಿಸಿದ್ದಾರೆ.

ದೇಶದ ಹಿತದೃಷ್ಟಿಯಿಂದ ಈ ನಿಷೇಧ ಸ್ವಾಗರ್ತ. ದೇಶದ ಭವಿಷ್ಯದ ಹಿತದೃಷ್ಟಿಯಿಂದ ಸಮಾನ ನಾಗರಿಕ ಸಂಹಿತೆ ಜಾರಿಯಾಗುವುದು ಅತೀ ಅಗತ್ಯ. ಇದರಿಂದ ಎಲ್ಲರೂ ಸಮಾನವಾಗಿರಲು ಸಾಧ್ಯ. ಇದನ್ನು ಜಾರಿಗೆ ತರಲು ನಾವು ಬದ್ಧರಾಗಿದ್ದೇವೆ ಎಂದ ಅವರು ಕರ್ನಾಟಕದ ಉತ್ತಮ‌ ಬೆಳವಣಿಗೆಗಾಗಿ ಬಿಜೆಪಿಗೆ ಮತ ನೀಡಿ ಕನಿಷ್ಠ ೧೩೦ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ನಡೆಸಲು ಅವಕಾಶ ನೀಡಿ ಎಂದು ಮನವಿ ಮಾಡಿದರು.


ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಬಾರಿಯ ಚುನಾವಣೆಯು ಹನುಮ ಭಕ್ತರು ಮತ್ತು ಟಿಪ್ಪು ಭಕ್ತರ ನಡುವೆ ನಡೆಯುವ ಚುನಾವಣೆಯಾಗಿದೆ. ಈ ಚುನಾವಣೆಯಲ್ಲಿ ದಾಖಲೆ ಮತಗಳ ಅಂತರದಲ್ಲಿ ಉಮಾನಾಥ ಕೋಟ್ಯಾನ್ ಅವರನ್ನು ಗೆಲ್ಲಿಸಲು ಮನವಿ ಮಾಡಿದರು.

ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮಾತನಾಡಿ, ಸುಳ್ಳು ಅಪಪ್ರಚಾರಗಳ ಮೂಲಕ ತನ್ನ ಮನೋಸ್ಥೈರ್ಯ ಕುಗ್ಗಿಸುವ ಕೆಲಸವನ್ನು ವಿಪಕ್ಷ ನಾಯಕರು ಮಾಡುತ್ತಿದ್ದಾರೆ. ಹಣ, ಹೆಂಡ ಹಂಚುವುದು, ಗೂಂಡ ವರ್ತನೆ ಮತ್ತು ಮತದಾರರಿಗೆ ಬೆದರಿಕೆ ಹಾಕುವ ಕೆಲಸಗಳು ನಡೆಯುತ್ತಿವೆ. ಈ ಬಗ್ಗೆ ಕಾರ್ಯಕರ್ತರು ಎಚ್ಚರವಾಗಿರಬೇಕು. ಮತದಾರರು ಆಮಿಷಗಳಿಗೆ ಬಲಿಯಾಗದೇ ಬಿಜೆಪಿಗೆ ಮತ ನೀಡಿ ಗೆಲ್ಲಿಸಬೇಕೆಂದರು. 

ವಾಗ್ಮಿ ಶ್ರೀಕಾಂತ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್.ಎಂ

ಚುನಾವಣಾ ಸಂಚಾಲಕ ಈಶ್ವರ ಕಟೀಲು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ,ಅಸ್ಸಾಂನ ಕ್ಯಾಬಿನೆಟ್ ಕಾರ್ಯದರ್ಶಿ ತೋಮರ್,  ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಬಿಜೆಪಿ ಮೂಡ ಅಧ್ಯಕ್ಷ ಮೇಘನಾಥ ಶೆಟ್ಟಿ, ಜಗದೀಶ್ ಶೇಣವ,  ಕ್ಷೇತ್ರ ಪ್ರಭಾರಿ ರೇಷ್ಮಾ ಉದಯ್ ಕುಮಾರ್ ಶೆಟ್ಟಿ, ಕೆ.ಎಂ.ಎಫ್ ಅಧ್ಯಕ್ಷ ಸುಚರಿತ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಡಲಾಧ್ಯಕ್ಷ ಸುನೀಲ್ ಆಳ್ವ ಸ್ವಾಗತಿಸಿದರು. ಬೆಳುವಾಯಿ ಭಾಸ್ಕರ ಆಚಾರ್ಯ ವಂದಿಸಿದರು.

Post a Comment

0 Comments