ಮೂಡುಬಿದಿರೆಯಲ್ಲಿ ಬಿಜೆಪಿ ವಿಜಯೋತ್ಸವ ರ್ಯಾಲಿಯೊಂದಿಗೆ ತೆರೆದ ವಾಹನದಲ್ಲಿ ಕೋಟ್ಯಾನ್, ಹನುಮಾನ್ ದೇವಸ್ಥಾನಕ್ಕೆ ಭೇಟಿ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆಯಲ್ಲಿ ಬಿಜೆಪಿ ವಿಜಯೋತ್ಸವ

ರ್ಯಾಲಿಯೊಂದಿಗೆ ತೆರೆದ ವಾಹನದಲ್ಲಿ ಕೋಟ್ಯಾನ್, ಹನುಮಾನ್ ದೇವಸ್ಥಾನಕ್ಕೆ ಭೇಟಿ



ಮೂಡುಬಿದಿರೆ- 22468 ಮತಗಳ ಅಂತರದಿಂದ ಕಾಂಗ್ರೆಸ್ ನ ಅಭ್ಯರ್ಥಿ ಮಿಥುನ್ ರೈ ಅವರನ್ನು ಪರಾಭವಗೊಳಿಸಿರುವ ಬಿಜೆಪಿಯ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಬಿಜೆಪಿ ಏರ್ಪಡಿಸಿದ ವಿಜಯೋತ್ಸವದಲ್ಲಿ ಭಾಗವಹಿಸಿದರು.



ಮೂಡುಬಿದಿರೆಗೆ ಆಗಮಿಸಿ ಮೊದಲಿಗೆ ವಿದ್ಯಾಗಿರಿಯಲ್ಲಿರುವ  ಬಿಜೆಪಿ ಕಛೇರಿಗೆ ಆಗಮಿಸಿ ಅಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕೃತಜ್ಞತೆಯನ್ನು ಸಲ್ಲಿಸಿದರು.


  ನಂತರ ಮೂಡುಬಿದಿರೆ ವರೆಗೆ ನಡೆದ ರ್ಯಾಲಿಯಲ್ಲಿ ತೆರೆದ ವಾಹನದಲ್ಲಿ ಸಂಚರಿಸಿ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.

   ಮಂಡಲಾಧ್ಯಕ್ಷ ಸುನೀಲ್ ಆಳ್ವ, ಚುನಾವಣಾ ಉಸ್ತುವಾರಿ ಈಶ್ವರ ಕಟೀಲ್, ಅಭ್ಯರ್ಥಿ ಪ್ರಮುಖ್ ಮೇಘನಾಥ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಶೆಟ್ಟಿಗಾರ್, ಕೇಶವ ಕರ್ಕೇರಾ, ದೇವಸ್ಥಾನದ ಆಡಳಿತ ಮೊಕ್ತೇಸರ ಉಮೇಶ್ ಜಿ.ಪೈ ಈ ಸಂದರ್ಭದಲ್ಲಿದ್ದರು.

Post a Comment

0 Comments