ಪಾಲಡ್ಕದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್, ಪಾಲಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆಹೆಚ್ ಪಿಟಿ ಸಹಯೋಗದಲ್ಲಿ ಮನರೇಗಾ ಕೂಲಿಕಾರರಿಗೆ "ಗ್ರಾಮ ಆರೋಗ್ಯ " ಅಭಿಯಾನದಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವು ಪಾಲಡ್ಕ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದಯಾವತಿ ಎಂ ಅವರು ದೀಪ ಬೆಳಗುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮೂಡುಬಿದಿರೆ ತಾಲೂಕಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಅನೇಕ ಕೃಷಿಕರು ಕೃಷಿ ಹಾಗೂ ವಿವಿಧ ಕಾಮಗಾರಿಗಳನ್ನು ತಮ್ಮ ಜಮೀನಿನಲ್ಲಿ ಮಾಡಿಸಿಕೊಂಡಿದ್ದು, ಅಂತಹ ನರೇಗಾ ಕೂಲಿ ಕಾರ್ಮಿಕರ ಉತ್ತಮ ಆರೋಗ್ಯ ದೃಷ್ಟಿಯಿಂದ "ಗ್ರಾಮ ಆರೋಗ್ಯ" ಅಭಿಯಾನವನ್ನು ಹಮ್ಮಿಕೊಂಡಿದ್ದು, ಈ ಮೂಲಕ ಆರೋಗ್ಯ ತಪಾಸಣೆ ಮಾಡಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಹೇಳಿದರು.
ಸಮುದಾಯ ಆರೋಗ್ಯಾಧಿಕಾರಿ ಸಾಗರ್ ಮಾತನಾಡಿ, ಆಹಾರ ಪದ್ಧತಿಯಿಂದಾಗಿ ಇಂದು ಜನರ ಆರೋಗ್ಯದಲ್ಲಿ ವೈಪರೀತ್ಯವಾಗುತ್ತದೆ. ಯೋಗ, ವ್ಯಾಯಾಮ ಹಾಗೂ ಪೌಷ್ಠಿಕ ಆಹಾರ ಸೇವನೆಯಿಂದ ನಿಮ್ಮ ಆರೋಗ್ಯ ವೃದ್ಧಿಸಲಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ದಿನೇಶ್ ಕೆ., ಉಪಾಧ್ಯಕ್ಷರಾದ ಸುಕೇಶ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಕ್ಷಿತಾ ಡಿ., ದ್ವೀತಿಯ ದರ್ಜೆ ಲೆಕ್ಕಸಹಾಯಕರು ಮೋಹಿನಿ, ತಾಲೂಕು ಐಇಸಿ ಸಂಯೋಜಕರಾದ ಅನ್ವಯ, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
0 Comments