ಮೂಡುಬಿದಿರೆ : ಬಿಆರ್ ಪಿ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ, ಪುಸ್ತಕ ವಿತರಣೆ
ಮೂಡುಬಿದಿರೆ : ಶಾಲಾ ಆರಂಭೊತ್ಸವದಂಗವಾಗಿ ಇಲ್ಲಿನ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ಬುಧವಾರ ನೂತನವಾಗಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಗುಲಾಬಿ ಹೂವನ್ನು ನೀಡಿ, ಬ್ಯಾಂಡ್ ಸೆಟ್ ಮೂಲಕ ಬರಮಾಡಿಕೊಳ್ಳಲಾಯಿತು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಮನಾಥ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇನ್ನರ್ ವ್ಹೀಲ್ ಸಂಸ್ಥೆಯು ಉಚಿತವಾಗಿ ನೀಡಿರುವ ನೋಟ್ ಬುಕ್ ಮತ್ತು ಸರಕಾರದಿಂದ ಬಂದಿರುವ ಟೆಕ್ಸ್ಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು ಈ ಶಾಲೆಯು ಹಳೆ ವಿದ್ಯಾರ್ಥಿಗಳು ಮತ್ತು ದಾನಿಗಳ ಸಹಕಾರದಿಂದ ಕಳೆದ 15 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಇನ್ನರ್ ವ್ಹೀಲ್ ಸಂಸ್ಥೆಯು ಕಳೆದ ಕೆಲವು ವರ್ಷಗಳಿಂದ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ನೀಡುತ್ತಿರುವುದಕ್ಕೆ ಅಭಿನಂದಿಸಿದರು.
ಮುಖ್ಯ ಅತಿಥಿಗಳಾಗಿ ಪುರಸಭಾ ಸದಸ್ಯೆ ಸ್ವಾತಿ ಪ್ರಭು, ಲೆಕ್ಕ ಪರಿಶೋಧಕ ಆಕಾಶ್ ದೀಪ್, ಇನ್ನರ್ ವ್ಹೀಲ್ ಕ್ಲಬ್ ನ ಕಾರ್ಯದರ್ಶಿ ಸ್ವಾತಿ ಬೋರ್ಕರ್, ನಿಯೋಜಿತ ಅಧ್ಯಕ್ಷೆ ಸರಿತಾ ಆಶೀರ್ವಾದ್ , ಕಾರ್ಯದರ್ಶಿ ಪೂರ್ಣಿಮಾ ದಾಮೋಧರ್, ಟ್ರಸ್ಟಿ ಪುಷ್ಪರಾಜ ಜೈನ್ ಭಾಗವಹಿಸಿದ್ದರು.ಶಿಕ್ಷಕ ಕಿರಣ್ , ಶಿಕ್ಷಕಿ ತೆರೆಜಾ ಕರ್ಡೋಜ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಪದ್ಮಜಾ ಸ್ವಾಗತಿಸಿದರು. ಶಿಕ್ಷಕ ವೆಂಕಟರಮಣ ಕೆರೆಗದ್ದೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಭರತ್ ವಂದಿಸಿದರು.
0 Comments