ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಗಳಿಸಿದ ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿ / ವಿದ್ಯಾರ್ಥಿನಿಯರ ತಂದೆ/ತಾಯಿ ರಾಜ್ಯ ಸರಕಾರಿ ನೌಕರರಾಗಿರಬೇಕು ಹಾಗೂ ಸರಕಾರಿ ನೌಕರರ ಸಂದ ಸದಸ್ಯರಾಗಿರಬೇಕು. ಸಂಘದಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕಕರ ಸಂಘದ ಜಿಲ್ಲಾ/ತಾಲೂಕು ಅಧ್ಯಕ್ಷರಿಂದ ದೃಢೀಕರಿಸಿ ಅರ್ಜಿ ಸಲ್ಲಿಸುವುದು. ನಮೂನೆ ಹಾಗೂ ಅಗತ್ಯ ದಾಖಲೆಗಳಿಲ್ಲದಿದ್ದಲ್ಲಿ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ
ನಿಗಮ ಮಂಡಳಿ, ಪ್ರಾಧಿಕಾರ, ವಿಶ್ವ ವಿದ್ಯಾನಿಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೌಕರರಾಗಿದ್ದಲ್ಲಿ ಅಂತವರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸಲು ಮೇ. 31 ಕೊನೆಯ ದಿನ(ಆನ್‌ಲೈನ್ ಲಿಂಕ್ : https ://bit.ly/ksgeapp2023 )ಗೆ ಸಂಪರ್ಕಿಸಬಹುದು ಎಂದು ಮೂಡುಬಿದಿರೆ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಸ್. ನಾಗೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments