ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಯಲ್ಲಿ ಆರಂಭೋತ್ಸವ
ಮೂಡುಬಿದಿರೆ: ಇಲ್ಲಿನ ಅರಮನೆ ಬಾಗಿಲು ಬಳಿ ಇರುವ ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯಲ್ಲಿ ಬುಧವಾರ ಶಾಲಾ ಆರಂಭೊತ್ಸವ ನಡೆಯಿತು.
ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ಶಾಲೆಗೆ ಬಂದ ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ನಂತರ ನಡೆದ ಸಭಾ ಕಾರ್ಯಕ್ರಮವು ವಿಶೇಷ ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು.
ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಶೆಟ್ಟಿಗಾರ್, ಮುಖ್ಯ ಶಿಕ್ಷಕಿ ಶರ್ಮಿಳಾ ವಾಸ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
0 Comments