ಶಿಕ್ಷಣ ಇಲಾಖೆಯ ಹಿರಿಯ ವಾಹನ ಚಾಲಕರಿಗೆ ಬೀಳ್ಕೊಡುಗೆ
ಮೂಡುಬಿದಿರೆ: ಶಿಕ್ಷಣ ಇಲಾಖೆಯಲ್ಲಿ ಹಿರಿಯ ವಾಹನ ಚಾಲಕರಾಗಿ
ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ ಅವರು ವಯೋ ನಿವೃತ್ತಿ ಹೊಂದಿದ್ದು ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ
ಕ.ರಾ.ಶಾ.ಶಿ.ಲಿಪಿಕ ನೌಕರರ,ವಾಹನ ಚಾಲಕರ ಮತ್ತು ಡಿ ಗ್ರೂಪ್ ನೌಕರರ ಸಂಘ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ., ಕ್ಷೇತ್ರ ಸಮನ್ವಯಾಧಿಕಾರಿಗಳು,
ಪತ್ರಾಂಕಿತ ವ್ಯವಸ್ಥಾಪಕರು,ಅಧೀಕ್ಷಕರು,ಸಿ.ಆರ್.ಪಿ,ಬಿ.ಐ.ಈ.ಆರ್.ಟಿ.ಗಳು,ಸಿಬ್ಬಂದಿ ವರ್ಗ ಮತ್ತು ವಿವಿಧ ಸಂಘಗಳ ತಾಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
0 Comments