ಮಾಂಟ್ರಾಡಿ ಇಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಬಣ್ಣ ಬಣ್ಣದ ಬಲೂನುಗಳನ್ನು ನೀಡಿ ಸ್ವಾಗತಿಸಲಾಯಿತು

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮಾಂಟ್ರಾಡಿ ಇಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಬಣ್ಣ ಬಣ್ಣದ ಬಲೂನುಗಳನ್ನು ನೀಡಿ ಸ್ವಾಗತಿಸಲಾಯಿತು.



ಮುಖ್ಯ ಅತಿಥಿಗಳಾಗಿ ನೆಲ್ಲಿಕಾರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಶಶಿಧರ್ ಎಂ,ಸದಸ್ಯರಾದ  ಅಣ್ಣಿ ಪೂಜಾರಿ,  ಸುನಂದ,  ಮೋಹಿನಿ ಮತ್ತು ಎಸ್ಡಿಎಂಸಿ ಅಧ್ಯಕ್ಷ  ರಾಜೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಮವಸ್ತ್ರವನ್ನು ವಿತರಿಸಿದರು.

ಮುಖ್ಯ ಶಿಕ್ಷಕಿ ಮಾರ್ಗರೇಟ್ ಡಿ'ಸೋಜ, ಶಿಕ್ಷಕಿ ಜೆಸಿಂತಾ, ಎಸ್ ಡಿ ಎಮ್ ಸಿ ಸದಸ್ಯರುಗಳು,ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 ಶಿಕ್ಷಕಿ ಮೃದುಲಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ನಂತರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.

Post a Comment

0 Comments