ಕಲ್ಲಬೆಟ್ಟು ಶಾಲೆಯಲ್ಲಿ ಶಾಲಾ ಆರಂಭೋತ್ಸವ: ಪುಸ್ತಕ, ಸಮವಸ್ತ್ರ ವಿತರಣೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಕಲ್ಲಬೆಟ್ಟು ಶಾಲೆಯಲ್ಲಿ ಶಾಲಾ ಆರಂಭೋತ್ಸವ:  ಪುಸ್ತಕ, ಸಮವಸ್ತ್ರ ವಿತರಣೆ





ಮೂಡುಬಿದಿರೆ: ಶಾಲಾ ಆರಂಭೋತ್ಸವದಂಗವಾಗಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಲಬೆಟ್ಟು ಇಲ್ಲಿಗೆ ದಾಖಲಾದ ವಿದ್ಯಾರ್ಥಿಗಳನ್ನು ಗೇಟಿನ ಬಳಿಯಲ್ಲಿ ಬ್ಯಾಂಡ್ ಸೆಟ್ ಮೂಲಕ ಬರಮಾಡಿಕೊಳ್ಳಲಾಯಿತು.
  ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಅವರು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಮತ್ತು ಸಮವಸ್ತ್ರವನ್ನು ವಿತರಿಸಿ ಶುಭ ಹಾರೈಸಿದರು.
  ಈ ಸಂದರ್ಭದಲ್ಲಿ ಎಸ್ ಡಿಎಂಸಿ ಅಧ್ಯಕ್ಷ ದಿನೇಶ್ ಕುಮಾರ್, ಉಪಾಧ್ಯಕ್ಷೆ ಪ್ರತಿಭಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.
 ಶಾಲಾ ಮುಖ್ಯ ಶಿಕ್ಷಕಿ ಮಾರ್ಗರೇಟ್ ಎಂ.ವಿ. ಸ್ವಾಗತಿಸಿದರು. ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. ವಿನಿಫ್ರೆಡ್ ವಂದಿಸಿದರು.
ಮೊದಲ ದಿನ ಒಂದನೇ ತರಗತಿಗೆ 17 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಾಯಿತು.

Post a Comment

0 Comments

Advertisement