ಜುಲೈ 1 ಮೂಡುಬಿದಿರೆಯಲ್ಲಿ ಮಾಧ್ಯಮ ಹಬ್ಬ
ಮೂಡುಬಿದಿರೆ: ರಜತ ಸಂಭ್ರಮದಲ್ಲಿರುವ ಮೂಡುಬಿದಿರೆ ಪ್ರೆಸ್‌ಕ್ಲಬ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದಿರೆ ಆಶ್ರಯದಲ್ಲಿ ಮಾಧ್ಯಮ ಹಬ್ಬ 2023 ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜುಲೈ 1ರಂದು ಬೆಳಗ್ಗೆ 11 ಗಂಟೆಯಿಂದ ಸಮಾಜಮಂದಿರದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಯಶೋಧರ ವಿ.ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ಅವರು ರಜತ ಸಂಭ್ರಮಕ್ಕೆ ಚಾಲನೆ ನೀಡಲಿರುವರು. ಶಾಸಕ ಉಮಾನಾಥ ಎ.ಕೋಟ್ಯಾನ್, ಮಾಜಿ ಸಚಿವ, ಸಮಾಜಮಂದಿರ ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ರೇಮಂಡ್ ಡಿ'ಕುನ್ಹಾ ಮುಖ್ಯ ಅತಿಥಿಗಳಾಗಿರುವರು. ನವ್ಯವಾಣಿ ಪತ್ರಿಕೆಯ ಸಂಪಾದಕ ಪಾರ್ಶ್ವನಾಥ ಜೈನ್ ಅವರನ್ನು ಸನ್ಮಾನಿಸಲಾಗುವುದು. ಮಂಗಳೂರು ವಿವಿ ಗೌರವ ಡಾಕ್ಟರೇಟ್ ಪುರಸ್ಕೃತ, ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೆಸ್.ಲಿಮಿಟೆಡ್‌ನ ಆಡಳಿತ ನಿರ್ದೇಶಕ ಡಾ.ಜಿ ರಾಮಕೃಷ್ಣ ಆಚಾರ್ ಅವರನ್ನು ಗೌರವಿಸಲಾಗುವುದು. ವಿಠಲ-ಶಾರದ ಭಾಗೀರಥಿ ಹೆಗಡೆಕಟ್ಟೆ ದತ್ತಿ ಉಪನ್ಯಾಸದಲ್ಲಿ ಪ್ರಚಲಿತ ಪತ್ರಿಕೋದ್ಯಮ ವಿಷಯದ ಕುರಿತು ವಿಜಯಕರ್ನಾಟಕ ಪತ್ರಿಕೆಯ ಮಂಗಳೂರು ಸ್ಥಾನೀಯ ಸಂಪಾದಕ ಬಿ.ರವೀಂದ್ರ ಶೆಟ್ಟಿ ಉಪನ್ಯಾಸ ನೀಡಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಪ್ರೇಮಶ್ರೀ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments