ಪಣಪಿಲ ಶಾಲೆಗೆ ದಾನಿಗಳಿಂದ ಕೊಡುಗೆಗಳ ಮಹಾಪೂರ:ಶಾಸಕರಿಂದ ಪುಸ್ತಕ, ಕೊಡೆ ವಿತರಣೆ

ಜಾಹೀರಾತು/Advertisment
ಜಾಹೀರಾತು/Advertisment
ಪಣಪಿಲ ಶಾಲೆಗೆ ದಾನಿಗಳಿಂದ ಕೊಡುಗೆಗಳ ಮಹಾಪೂರ:ಶಾಸಕರಿಂದ ಪುಸ್ತಕ, ಕೊಡೆ ವಿತರಣೆ



ಮೂಡುಬಿದಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಣಪಿಲ ಇಲ್ಲಿನ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ದಾನಿಗಳ ಸಹಾಯದಿಂದ ನೀಡಲಾದ ವಿವಿಧ ಸವಲತ್ತುಗಳನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ವಿತರಿಸಿದರು.

ಬಿರುವೆರ್ ಕುಡ್ಲ ವತಿಯಿಂದ ಕೊಡಮಾಡಿದ ಉಚಿತ ಕೊಡೆ ವಿತರಣೆಯನ್ನು ಶಾಸಕರು ಸಾಂಕೇತಿಕವಾಗಿ ವಿತರಿಸಿದರು.

ಉದ್ಯಮಿ ರವೀಂದ್ರ ಶೆಟ್ಟಿಯವರಿಂದ ಅಥಿತಿ ಶಿಕ್ಷಕರ ವ್ಯವಸ್ಥೆ, ಉದ್ಯಮಿ ಭರತ್ ಶೆಟ್ಟಿಯವರಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಘೋಷಿಸಲಾಯಿತು.

ಈ ಸಂದರ್ಭದಲ್ಲಿ SSLC ಮತ್ತು PUC ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಶಾಲೆಯಲ್ಲಿ ಶಾಸಕರ ಅನುದಾನದಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಕೊಠಡಿ ಕಾಮಗಾರಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ದಾನಿಗಳಾದ ಕರ್ನಾಟಕ ರಾಜ್ಯ ಕ್ವಾರಿ ಅಸೋಸಿಯೇಷನ್ ಇದರ ಅಧ್ಯಕ್ಷ ರವೀಂದ್ರ ಶೆಟ್ಟಿ ಹಾಗೂ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ತುಳಸಿ ಮೂಲ್ಯ, ಸದಸ್ಯರಾದ ಮುನಿರಾಜ್ ಹೆಗ್ಡೆ, ದೀಕ್ಷಿತ್ ಪಣಪಿಲ, ಕೆ ಸಂತೋಷ್ ಪೂಜಾರಿ,ಶಿಕ್ಷಣ ಇಲಾಖೆಯ ಸಿ.ಆರ್.ಪಿ.ಆದರ್ಶ್ ಕಟ್ಟಿಮಣಿ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು. ಸುನಿಲ್ ಪಣಪಿಲ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments