*ಮೂಡುಬಿದಿರೆ
ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ
ಮೂಡುಬಿದಿರೆ: ಪ್ರಜಾಪ್ರಭುತ್ವ ದಲ್ಲಿ ಮೂಲಭೂತ ಹಕ್ಕುಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಮೂಲಭೂತ ಹಕ್ಕುಗಳ ಸಮರ್ಪಕ ಉಪಯೋಗದಿಂದ ದೇಶ ಬಲಿಷ್ಠವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಂಪತ್ ಸಾಮ್ರಾಜ್ಯ ಶಿರ್ತಾಡಿ ಅವರು ಅಭಿಪ್ರಾಯಪಟ್ಟರು.
ಅವರು ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಶಾಲಾ ಸಂಸತ್ತನ್ನು ಉದ್ಘಾಟಿಸಿ ಮಾತನಾಡಿದರು. ಮಂಗಳೂರು ಉತ್ತರ ಪಣಂಬೂರು ವಿಭಾಗದ ಎಸಿಪಿ ಮನೋಜ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾರತದ ಪ್ರಜಾಪ್ರಭುತ್ವದ ಪ್ರಾಮುಖ್ಯತೆ ಮತ್ತು ಶಾಲಾ ಸಂಸತ್ತಿನ ಅಗತ್ಯತೆಯನ್ನು ವಿವರಿಸಿದರು. ರೋಟರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ನಾರಾಯಣ ಪಿಎಂ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ಅನಂತ ಕೃಷ್ಣರಾವ್ , ಸಂಚಾಲಕ ಪ್ರವೀಣ್ ಚಂದ್ರ ಜೈನ್ ಅವರು ನೂತನವಾಗಿ ಆಯ್ಕೆಯಾದ ಸಂಸತ್ ಸದಸ್ಯರಿಗೆ ಶುಭ ಕೋರಿದರು. ಮುಖ್ಯೋಪಾಧ್ಯಾಯಿನಿ ತಿಲಕಾ ಅನಂತವೀರ ಜೈನ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿ ನಾಯಕಿ ಖುಷಿ ಮತ್ತು ಸಾನಿಕಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾನಿಯಾ ಫಾತಿಮಾ ಸ್ವಾಗತಿಸಿದರು. ಸುಹಾ ಕಾರ್ಯಕ್ರಮ ನಿರ್ವಹಿಸಿದರು. ನುಹಾ ವಂದನಾರ್ಪಣೆಗೈದರು.
0 Comments