ಸ್ಪೂರ್ತಿ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ, ಪುಸ್ತಕ ವಿತರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಸ್ಪೂರ್ತಿ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ, ಪುಸ್ತಕ ವಿತರಣೆ



ಮೂಡುಬಿದಿರೆ: ಇಲ್ಲಿನ ಅರಮನೆ ಬಾಗಿಲು ಬಳಿ ವಿಶೇಷ ಚೇತನ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯ 2023-2024 ನೇ ಶ್ಯೆಕ್ಷಣಿಕ ವರ್ಷದ ಪೋಷಕರ ಮೊದಲ ಸಭೆ ಹಾಗೂ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ವತಿಯಿಂದ ಮಕ್ಕಳಿಗೆ ಬರವಣಿಗೆ ಪುಸ್ತಕ ವಿತರಣಾ 



 ಸ್ಫೂರ್ತಿ ಶಾಲೆಯ ಸಭಾಂಗಣದಲ್ಲಿ ಶನಿವಾರ ನಡೆಯಿತು. 

ಶಾಲೆಯ ಸಂಸ್ಥಾಪಕ ಪ್ರಕಾಶ್ ಜೆ ಶೆಟ್ಟಿಗಾರ್ ಶಾಲೆಯ ನಿಯಮಗಳ ಬಗ್ಗೆ, ರಾಷ್ಟ್ರೀಯ ಹಬ್ಬಗಳನ್ನು ಆಚರಣೆ ಮಾಡುವ ಬಗ್ಗೆ ಹಾಗೂ ವಿಶೇಷ ಮಕ್ಕಳಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಮಕ್ಕಳಿಗೆ ಪುಸ್ತಕ ನೀಡಿ ಸಹಕರಿಸಿದ ಸೇವ್ ಲ್ಯೆಪ್ ಚಾರಿಟೇಬಲ್ ಟ್ರಸ್ಟಿನ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್ ಹಾಗೂ ಭಾಗ್ಯಶ್ರೀ ಅರ್ಜುನ್ ಭಂಡಾರ್ಕರ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.



  ಪೋಷಕರ ಸಮಿತಿಯ ಅಧ್ಯಕ್ಷೆ ಲತಾ ಸುರೇಶ್,ಪದಾಧಿಕಾರಿಗಳಾದ ಸ್ವರ್ಣಲತಾ ಸುಧೀರ್, ರಮಿಜಾ ಬಾನು ಮುಖ್ಯ ಶಿಕ್ಷಕಿ ಶರ್ಮಿಳಾ ವಾಸ್ ಉಪಸ್ಥಿತರಿದ್ದರು. ಶಿಕ್ಷಕಿ ಕು.ಸುಚಿತ್ರ ಸ್ವಾಗತಿಸಿದರು. ಶಿಕ್ಷಕಿ ಅನಿತಾ ರೋಡ್ರಿಗಸ್ ಈ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ವಂದಿಸಿದರು.

Post a Comment

0 Comments