ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳ ರಕ್ಷಣೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ಇಂದು ಮುಂಜಾನೆ ರಕ್ಷಿಸಿದ್ದಾರೆ.



   ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು  ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ.



ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಗೋಕಳ್ಳರು ಕಾರನ್ನು ಮತ್ತು ಮೊಬೈಲ್ ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಮೂಡುಬಿದಿರೆಯ ಪೊಲೀಸ್  ಉಪ ನಿರೀಕ್ಷಕ ಸಿದ್ದಪ್ಪ, ಬಜರಂಗದಳದ ತಾಲೂಕು ಸಂಚಾಲಕ ಅಭಿಲಾಶ್ ಸಹಿತ ಕಾರ್ಯಕರ್ತರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Post a Comment

0 Comments