ಅಪಘಾತ : ವಿದ್ಯಾರ್ಥಿಯ ಸಾವು,
ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಮೂಡುಬಿದಿರೆ: ಸೋಮವಾರದಂದು ಖಾಸಗಿ ಬಸ್ ಬೈಕ್‌ಗೆ ಢಿಕ್ಕಿ ಹೊಡೆದು ಆಳ್ವಾಸ್ ಕಾಲೇಜು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟಿದ್ದು, ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ಮೂಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮಂಗಳವಾರ ಸಾಯಂಕಾಲ ವಿದ್ಯಾಗಿರಿ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು.
ಶಾಂತಿ ಪ್ರಸಾದ್ ಹೆಗ್ಡೆ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಖಾಸಗಿ ಬಸ್ ಚಾಲಕರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದಾಗಿ ಮೂಡುಬಿದಿರೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 10 ಕ್ಕೂ ಅಧಿಕ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸುವವರ ವಿರುದ್ದ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಕಾರ್ತಿಕ್ ಆಚಾರ್ಯ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಮೂಡುಬಿದಿರೆ ವಲಯದ ಖಾಸಗಿ ಬಸ್ಸಿನ ಎಲ್ಲಾ ಚಾಲಕರು ಕಟ್ಟು ನಿಟ್ಟಾಗಿ ರಸ್ತೆ ನಿಯಮಗಳನ್ನು ಪಾಲಿಸಬೇಕು. ವಿಶೇಷ ಜನಸಂಚಾರವಿರುವ ಪ್ರದೇಶಗಳಲ್ಲಿ ವೇಗಕ್ಕೆ ಕಡಿವಾಣ ಹಾಕಬೇಕು. ಆಳ್ವಾಸ್ - ವಿದ್ಯಾಗಿರಿ ಬಳಿ ಹೆದ್ದಾರಿಗೆ ಹಂಪ್ಸ್ ಹಾಕಬೇಕು. ಶಾಲಾ ಕಾಲೇಜುಗಳ ಬಳಿ ಡಿವೈಡರ್‌ಗಳನ್ನು ಅಳವಡಿಸಿ ಬಸ್ಸುಗಳ ವೇಗಕ್ಕೆ ಕಡಿವಾಣ ಹಾಕಬೇಕು ಎಂಬ ಮನವಿಯನ್ನು ವಿದ್ಯಾರ್ಥಿಗಳು ಪೊಲೀಸ್ ವೃತ್ತ ನಿರೀಕ್ಷಕ ನಿರಂಜನ್ ಅವರಿಗೆ ನೀಡಿದರು.
0 Comments