ಬಿರುವೆರ್ ಕುಡ್ಲ ಸಂಘಟನೆಯಿಂದ ಮತ್ತೊಂದು ಅತಿದೊಡ್ಡ ಸೇವಾಕಾರ್ಯ:ಬಡ ಕುಟುಂಬಕ್ಕೆ ಮನೆ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲು
ಬಿರುವೆರ ಕುಡ್ಲ (ರಿ.), ಬಜಪೆ ಘಟಕದ ವತಿಯಿಂದ ಮಹಾ ಸೇವಾ ಯೋಜನೆಯ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದವರ ಕುಟುಂಬಕ್ಕೆ ಸುಸಜ್ಜಿತವಾಗಿ ನಿರ್ಮಿಸಿದ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಿ, ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಶಾಸಕರಾದ ಶ್ರೀ ಡಾ.ವೈ ಭರತ್ ಶೆಟ್ಟಿ, ಶ್ರೀ ವೇದವ್ಯಾಸ್ ಕಾಮತ್, ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಸಾಯಿ ರಾಮ್, ಬಿರುವೆರ್ ಕುಡ್ಲ ಸಂಘಟನೆಯ ಅಧ್ಯಕ್ಷರಾದ ಶ್ರೀ ಉದಯ್ ಪೂಜಾರಿ ಬಳ್ಳಾಲಬಾಗ್, ಬಜಪೆ ಘಟಕದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಇತರೆ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
0 Comments