ನಿಧನ: ಅನಂತರಾಜ್ ಇಂದ್ರ ಮೂಡುಬಿದಿರೆ
ಮೂಡುಬಿದಿರೆ: ವಿಶ್ರಾಂತ ಶಿಕ್ಷಕ, ಪಡುಬಸದಿಯ ಪುರೋಹಿತ ಪಿ. ಅನಂತರಾಜ್ ಇಂದ್ರ (94) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ .
ಮಂಗಳೂರಿನ ಕೆನರಾ ಪ್ರೌಢಶಾಲೆ, ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆ ಬಳಿಕ ಮೂಡುಬಿದಿರೆಯ ಜೈನ ಪ್ರೌಢಶಾಲೆಯಲ್ಲಿ ದೀರ್ಘ ಅವಧಿಗೆ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾಗಿ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ, ಪ್ರೋತ್ಸಾಹವನ್ನು ನೀಡಿದ್ದರು.
ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಮಾಜಿ ಸಚಿವ ಅಮರನಾಥ ಶೆಟ್ಟಿ ಅಭಯಚಂದ್ರಜೈನ್ ಇವರ ವಿದ್ಯಾರ್ಥಿಗಳಾಗಿದ್ದರು ಎನ್ನುವುದು ವಿಶೇಷ.
ಅನಂತ್ ರಾಜ್ ಅವರ ನಿಧನಕ್ಕೆ ಮೂಡುಬಿದಿರೆ ಶ್ರೀ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳ ಸಹಿತ ಪ್ರಮುಖರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ
ಅನಂತರಾಜ್ ಇಂದ್ರ ಅವರ ಅಂತ್ಯಕ್ರಿಯೆ ಇಂದು ಮಂಗಳವಾರ ಮೂಡುಬಿದಿರೆಯಲ್ಲಿ ನಡೆಯಲಿದೆ .
0 Comments