ಉಡುಪಿ ವೀಡಿಯೋ ದಂಗಲ್:ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ
ಉಡುಪಿ ವಾಶ್ ರೂಂ ಚಿತ್ರೀಕರಣದ ವಿರುದ್ಧ ಬಿಜೆಪಿ ದಕ್ಷಿಣ ಕನ್ನಡ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ಸಭೆ ಮಂಗಳೂರಿನ ಪುರಭವನದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ ಎಂ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ವಾಶ್ ರೂಂ ಚಿತ್ರಕರಣದ ವಿರುದ್ಧ ನ್ಯಾಯಾಂಗ ತನಿಖೆ ನಡೆಸಲು ಆಗ್ರಹಿಸಿದರು.
ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ ಮಾಜಿ ಸಚಿವ, ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ಪಕ್ಷದ ದಬ್ಬಾಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಪಕ್ಷದ ಜಿಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ,ಪಕ್ಷದ ಹಿರಿಯರು ವಿವಿಧ ಮೋರ್ಚಾ ,ಪ್ರಕೋಷ್ಟದ ಅದ್ಯಕ್ಷರು ಸದಸ್ಯರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
0 Comments