ಕೌಟುಂಬಿಕ ಸಂಬಂಧಗಳ ಬಗ್ಗೆ ಮಕ್ಕಳಿಗೆ ತಿಳಿಸಿ : ಪ್ರೊ.ಮಿತ್ರಪ್ರಭಾ ಹೆಗ್ಡೆ
ಮೂಡುಬಿದಿರೆ: ಇಂದಿನ ತಾಂತ್ರಿಕ ಯುಗದಲ್ಲಿ ಕೌಟುಂಬಿಕ ಸಂಬಂಧಗಳ ಬಗ್ಗೆ ಮಕ್ಕಳಿಗೆ ತಿಳಿ ಹೇಳಬೇಕು. ಪೋಷಕರ ಆಸೆಗಳನ್ನು ಮಕ್ಕಳ ಮೇಲೆ ಹೇರುವ ಬದಲು ಮಕ್ಕಳ ಆಸೆಗಳಿಗೆ ಬೆಲೆ ಕೊಡಬೇಕು ಎಂದು ಕಾರ್ಕಳ ಶ್ರೀ ವೆಂಕಟರಮಣ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲೆ ಮಿತ್ರ ಪ್ರಭಾ ಹೆಗ್ಡೆ ಅಭಿಪ್ರಾಯಪಟ್ಟರು. ಅವರು ರೋಟರಿ ವಿದ್ಯಾ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಉಪನ್ಯಾಸಕಾರರಾಗಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ನಾರಾಯಣ ಪಿ ಎಂ ಅವರು ಸಂಸ್ಥೆಯ ಬೆಳವಣಿಗೆ ಕುರಿತು ಮಾತನಾಡಿದರು. ಕಾರ್ಯದರ್ಶಿ ಅನಂತ ಕೃಷ್ಣರಾವ್ ಪೋಷಕರ ಜವಾಬ್ದಾರಿಗಳ ಬಗ್ಗೆ ಮಾತನಾಡಿದರು. ಸಂಚಾಲಕ ಪ್ರವೀಣ ಚಂದ್ರ ಜೈನ್ ಪೋಷಕರ ಸಲಹೆಗಳ ಕುರಿತು ಉತ್ತರವಿತ್ತರು. ಉಪಾಧ್ಯಕ್ಷ ಅಬ್ದುಲ್ ರವೂಫ್ , ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಬಿ. ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲೆ ಶೀಲಾ ಕಾಂತರಾಜ್, ಸಿಬಿಎಸ್ಸಿ ವಿಭಾಗ ಮುಖ್ಯಸ್ಥೆ ರೂಪಾ ಮಸ್ಕರೇನಸ್, ರೋಟರಿ ಶಾಲಾ ಮುಖ್ಯೋಪಾಧ್ಯಾಯಿನಿ ತಿಲಕಾ ಅನಂತವೀರ ಜೈನ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸರಿತಾ ಆಶೀರ್ವಾದ್ ಹಾಗೂ ರೋಟರಿ ಆಡಳಿತ ಮಂಡಳಿಯ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕಗಳನ್ನು ಪಡೆದ ಸಂಸ್ಥೆಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಂಚಾಲಕ ಮೋಹನ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಹಿರಿಯ ಸಂಯೋಜಕ ಗಜಾನನ ಮರಾಠೆ ವಂದನಾರ್ಪಣೆಗೈದರು. ರಾಜಲಕ್ಷ್ಮಿ, ಪೂಜಾ ಕಾರ್ಯಕ್ರಮ ನಿರ್ವಹಿಸಿದರು.
0 Comments