ಬನ್ನಡ ಕಾಲೇಜಿನ ಪ್ರಥಮ ವರ್ಷದ ವಾರ್ಷಿಕೋತ್ಸವ
ಮೂಡುಬಿದಿರೆ: ವಿಶ್ವ ವಿದ್ಯಾನಿಲಯ ಕಾಲೇಜು ಬನ್ನಡ್ಕ,ಇಲ್ಲಿನ ಪ್ರಥಮ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನಳಿನಾಕ್ಷಿ ಸಭಾ ಭವನ ಬನ್ನಡ್ಕ ಇಲ್ಲಿ ನಡೆಯಿತು.
ಶಾಸಕ ಉಮಾನಾಥ ಎ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿ ಕಾಲೇಜಿನ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಕೀರ್ತಿಯನ್ನು ಹೆಚ್ಚಿಸಬೇಕೆಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಮುನಿರಾಜ್ ರೆಂಜಾಳ ಇವರು ಮಾತಾನಾಡಿ,'ಅಂಕಗಳನ್ನು ಪಡೆಯುವುದು ಮಾತ್ರ ಶಿಕ್ಷಣವಲ್ಲ,ಬದುಕಿನ ಮೌಲ್ಯ ಗಳೊಂದಿಗೆ ಅತ್ಯುತ್ತಮ ಜೀವನ ವಿಧಾನವನ್ನು ರೂಪಿಸಿಕೊಳ್ಳುವುದೆ ನಿಜವಾದ ಶಿಕ್ಷಣ' ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ ಜಯರಾಜ್ ಅಮೀನ್ ರವರು ಮಾತಾನಾಡಿ,'ಮಂಗಳೂರು ವಿಶ್ವವಿದ್ಯಾಲಯದ ಹೆಮ್ಮೆಯ 6ನೇ ಘಟಕ ಕಾಲೇಜಾಗಿರುವ ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ ಭವಿಷ್ಯದಲ್ಲಿ ಅತ್ಯುತ್ತಮ ಕಾಲೇಜಗಿ ಬೆಳೆಯುತ್ತದೆ ಎಂಬ ವಿಶ್ವಾಸ ನನಗಿದೆ ,ಅದಕ್ಕೆ ಎಲ್ಲರು ಶ್ರಮಿಸ ಬೇಕಾಗಿದೆ ಎಂದರು.' ಈ ಸಂದರ್ಭದಲ್ಲಿ ಕಾಲೇಜಿನ ಮೊದಲ ವಾರ್ಷಿಕ ಸಂಚಿಕೆ 'ಬನಸಿರಿ'ಯನ್ನು ಬಿಡುಗಡೆಗೊಳಿಸಲಾಯಿತು.
ಮುಖ್ಯ ಅತಿಥಿಗಳಾಗಿ ದಯಾನಂದ ಪೈ ಭಾಗವಹಿಸಿದ್ದರು. ನಿವೃತ್ತಿ ಹೊಂದುತ್ತಿರುವ ಸ.ಹಿ.ಪ್ರಾ.ಶಾಲೆ ಪಾಡ್ಯಾರು ಇಲ್ಲಿನ ಶೋಭಾ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹಾಗೂ ವಿವಿಧ ಅಸೋಸಿಯೇಷನ್ ವತಿಯಿಂದ ನಡೆಸಲಾದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ವಿದ್ಯಾರ್ಥಿ ಸಂಘದ ಸಂಚಾಲಕರಾದ ಮಂಜುಶ್ರೀ .ಪಿ ಇವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಂಯೋಜಕರಾದ ಪ್ರೊ ಗಣಪತಿ ಗೌಡ ಸ್ವಾಗತಿಸಿದರು. ಸುಲೋಚನಾ ಪಚ್ಚಿನಡ್ಕ ಮತ್ತು ಆಶಾ ಶ್ಯಾಲೆಟ್ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿದರು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಶಿಕಲಾ ಎನ್ . ವಂದಿಸಿದರು.
0 Comments