ಪತ್ರಿಕೋದ್ಯಮದ ಹಿರಿಯ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ

ಜಾಹೀರಾತು/Advertisment
ಜಾಹೀರಾತು/Advertisment

 ಪತ್ರಿಕೋದ್ಯಮದ ಹಿರಿಯ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ



ಮೂಡುಬಿದಿರೆ:  ‘ಮಾಧ್ಯಮ ಕ್ಷೇತ್ರದಲ್ಲಿ ಧನಾತ್ಮಕ ಚಿಂತನೆಯು ಇಂದಿನ   ಅವಶ್ಯವಾಗಿದೆ. ನೀವು ಸಮಾಜಕ್ಕೆ ಕೊಡುಗೆ ನೀಡುವಂತವರಾಗಬೇಕು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ  ಪಿ.ಜಿ ಸೆಮಿನಾರ್‌ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ‘ಫೀರ್ ಮಿಲೇಂಗೆ’ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವೃತ್ತಿ ಜೀವನದಲ್ಲಿ ನೈತಿಕತೆ ಮುಖ್ಯ. ಯಾವುದೇ ಸಂಬಂಧ ಅಥವಾ ಕೆಲಸ ನಿರ್ವಹಿಸುವಾಗ ನಿರೀಕ್ಷೆ ರಹಿತ ಮನೋಭಾವ ಹೊಂದಿರಬೇಕು. ಆಗ ಯಶಸ್ಸು ಸಾಧ್ಯ ಎಂದರು.

 ಪ್ರತಿಯೊಬ್ಬರು ಅನನ್ಯ ವ್ಯಕ್ತಿತ್ವದೊಂದಿಗೆ ಸಮಾಜದಲ್ಲಿ ಒಗ್ಗಟ್ಟಿನಿಂದ ಬದುಕುವ ಮನಸ್ಥಿತಿ ಹೊಂದಿರಬೇಕು. ಪತ್ರಿಕೋದ್ಯಮ ವಿಭಾಗದಲ್ಲಿರುವ ‘ಜೀವಕಳೆ’ ನನಗೆ ಇಷ್ಟ ಎಂದು ಸಂತಸ ವ್ಯಕ್ತಪಡಿಸಿದರು.

ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ‘ಪತ್ರಿಕೋದ್ಯಮ ವಿದ್ಯಾರ್ಥಿಗಳು ಪ್ರೀತಿ, ವಿಶ್ವಾಸದಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಖುಷಿ ನೀಡಿದೆ. ಇಲ್ಲಿ ಕಲಿತ ಪಾಠ ಬದುಕಿನಲ್ಲಿ ಅಳವಡಿಸಿಕೊಂಡಾಗ ಶೇಕಡಾ ೧೦೦ ಸಾಧನೆ ಮಾಡುತ್ತೀರಿ’ ಎಂದರು. 

ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಇದ್ದರು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.


ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ, ಸಹ ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಹೊಡೆಯಾಲ, ಸಹಾಯಕ ಪ್ರಾಧ್ಯಾಪಕ ಹರ್ಷವರ್ಧನ ಪಿ.ಆರ್, ನಿಶಾನ್ ಕೋಟ್ಯಾನ್, ಇಂಚರಾ ಗೌಡ, ದೀಕ್ಷಿತಾ, ದುರ್ಗಾ ಪ್ರಸನ್ನ, ರಕ್ಷಿತಾ ತೋಡಾರು,   ಆಡ್ಮಿಷನ್ ಅಧಿಕಾರಿ ಹನಮಂತಪ್ಪ ಸಿಮಿಕೇರಿ ಇದ್ದರು. 

ವಿದ್ಯಾರ್ಥಿಗಳಾದ ಅವಿನಾಶ್ ಕಟೀಲ್ ಮತ್ತು ಪ್ರಖ್ಯಾತ್ ಮಿಜಾರ್ ನಿರೂಪಿಸಿದರು.

Post a Comment

0 Comments