ಕಂಬಳ ಕ್ರೀಡೆಯಲ್ಲಿ ಮಾಡಿರುವ ವಾರ್ಷಿಕ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು

ಜಾಹೀರಾತು/Advertisment
ಜಾಹೀರಾತು/Advertisment

 ಬೆಂಗಳೂರು ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ನಿಂದ ಕಂಬಳದ ವೇಗದ ಓಟಗಾರ ಶ್ರೀನಿವಾಸ ಗೌಡಗೆ ಗೌರವ



ಮೂಡುಬಿದಿರೆ: ಬೆಂಗಳೂರು ಮ್ಯಾನೇಜ್ ಮೆಂಟ್ ಅಸೋಸಿಯೇಶನ್ 66 ನೇ ವರ್ಷದ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿ  ಪ್ರಧಾನ ಹಾಗೂ ಸದಸ್ಯರ ದಿನವು ಶನಿವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೇಲ್ ನಲ್ಲಿ ನಡೆಯಿತು.

ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು   ಕ್ರೀಡಾ ರತ್ನ ಪುರಸ್ಕೃತ,  ಕಂಬಳದ ವೇಗದ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು ಕಂಬಳ ಕ್ರೀಡೆಯಲ್ಲಿ ಮಾಡಿರುವ ವಾರ್ಷಿಕ ಸಾಧನೆಗಾಗಿ ಗುರುತಿಸಿ ಗೌರವಿಸಿದರು.

ಅಸೋಸಿಯೇಷನ್ ನ ಅಧ್ಯಕ್ಷ ಡಾ. ಕೆ.ಎಸ್.ನಾರಾಯಣ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಎಫ್ ಐಸಿಸಿ ಕೌನ್ಸಿಲ್ ನ ಅಧ್ಯಕ್ಷ ಕೆ.ಉಲ್ಲಾಸ್ ಕಾರಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ನಿವೃತ್ತ ಐಎಎಸ್ ಅಧಿಕಾರಿ ಜೈರಾಜ್, ಪ್ರಶಸ್ತಿ ಸಮಿತಿಯ ಅಧ್ಯಕ್ಷೆ ಮಧುರಾಣಿ ಗೌಡ, ಅಸೋಸಿಯೇಷನ್ ನ ಉಪಾಧ್ಯಕ್ಷರುಗಳಾದ ಕೆ.ಪಿ.ನಾಗೇಶ್, ಕೆ.ಎಂ.ಶ್ರೀನಿವಾಸ ಮೂರ್ತಿ, ಕಾರ್ಯದರ್ಶಿ ವಿ.ಕೃಷ್ಣಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

0 Comments