ಮಣಿಪುರದಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿರುವ ಆರೋಪಿಗಳನ್ನು ಎನ್ಕೌಂಟರ್ ಮಾಡಿ ಸಾಯಿಸಿ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದ್ದಾರೆ

ಜಾಹೀರಾತು/Advertisment
ಜಾಹೀರಾತು/Advertisment

 ಮಣಿಪುರದಲ್ಲಿ ಮಹಿಳೆಯನ್ನು  ಬೆತ್ತಲೆ ಮಾಡಿ ಮೆರವಣಿಗೆ ಮಾಡಿರುವ ಆರೋಪಿಗಳನ್ನು ಎನ್ಕೌಂಟರ್ ಮಾಡಿ ಸಾಯಿಸಿ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದ್ದಾರೆ




ಅವರು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಡಳಿತ ಸೌಧದ ಎದುರು ಕೇಂದ್ರ ಸರಕಾರದ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿ ಮಾತನಾಡಿದರು. ಉತ್ತರ ಪ್ರದೇಶದಲ್ಲಿ ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಇಲ್ಲೂ ಆಗಬೇಕಾಗಿದೆ. ಮಹಿಳೆಯರ ಬೆತ್ತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿ ಮೌನ ವಹಿಸಿರುವುದು ಯಾಕೆ ಎಂದು ಪ್ರಶ್ನಿಸಿದ ಜೈನ್ ಪ್ರಕರಣದ ಬಗ್ಗೆ ಕ್ರಮ ಕೈ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.


ಕೆಪಿಸಿಸಿ ಉಸ್ತುವಾರಿ ಮಿಥುನ್ ರೈ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ,  ಪುರಸಭಾ ಸದಸ್ಯರಾದ ಕೊರಗಪ್ಪ, ಪಿ.ಕೆ.ಥೋಮಸ್, ಸುರೇಶ್ ಪ್ರಭು, ಹಿಮಾಯತ್ತುಲ್, ಇಕ್ಬಾಲ್ ಕರೀಂ, ಪುರಂದರ ದೇವಾಡಿಗ, ವಾಲ್ಪಾಡಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಅರುಣ್ ಶೆಟ್ಟಿ, ವಕ್ತಾರ ರಾಜೇಶ್ ಕಡಲಕೆರೆ ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

......

ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಜೈನ್, ರೈ

   ಪ್ರತಿಭಟನೆಯ ನಂತರ ತಹಶೀಲ್ದಾರ್ ಅವರಿಗೆ ಮನವಿ ನೀಡಲು ಹೋದಾಗ ತಹಶೀಲ್ದಾರ್ ಅವರು ವಿಳಂಬವಾಗಿ ಬಂದ ಸಂದರ್ಭ ಅಭಯಚಂದ್ರ ಜೈನ್ ಮತ್ತು ಮಿಥುನ್ ರೈ ಅವರು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು.

Post a Comment

0 Comments