ಭಜರಂಗದಳ ಕಾರ್ಯಕರ್ತರ ಗಡಿಪಾರು ವಿಚಾರ: ಕಾರ್ಯಕರ್ತರನ್ನು ಭೇಟಿಯಾಗಿ ಧೈರ್ಯ ತುಂಬಿದ ನಳಿನ್ ಕುಮಾರ್

ಜಾಹೀರಾತು/Advertisment
ಜಾಹೀರಾತು/Advertisment

 ಭಜರಂಗದಳ ಕಾರ್ಯಕರ್ತರ ಗಡಿಪಾರು ವಿಚಾರ: ಕಾರ್ಯಕರ್ತರನ್ನು ಭೇಟಿಯಾಗಿ ಧೈರ್ಯ ತುಂಬಿದ ನಳಿನ್ ಕುಮಾರ್



ಆ್ಯಂಟಿ ಕಮ್ಯುನಲ್ ವಿಂಗ್ ಹೆಸರಿನಲ್ಲಿ ಭಜರಂಗದಳ ಕಾರ್ಯಕರ್ತರನ್ನು ಗಡಿಪಾರು ಮಾಡಿಲು ನೋಟೀಸು ಹೊರಡಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲು ಖಂಡಿಸಿದ್ದಾರೆ.


ಮಂಗಳೂರಿನಲ್ಲಿ ಗಡಿಪಾರು ನೋಟೀಸಿಗೊಳಗಾದ ಭಜರಂಗದಳ ಕಾರ್ಯಕರ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಳಿನ್ ಕುಮಾರ್ ಕಟೀಲು ಕಾರ್ಯಕರ್ತರ ಜೊತೆಗೆ ತಾನು ಹಾಗೂ ಪಕ್ಷ ಗಟ್ಟಿಯಾಗಿ ನಿಲ್ಲುವ ಭರವಸೆ ನೀಡಿದ್ದಾರೆ.


ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ಶರಣ್ ಪಂಪುವೆಲ್, ಶಿವಾನಂದ ಮೆಂಡನ್, ಪುನೀತ್ ಅತ್ತಾವರ ಹಾಗೂ ಇತರರು ಉಪಸ್ಥಿತರಿದ್ದರು.

Post a Comment

0 Comments