ಮೈತ್ರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ
ಮೂಡುಬಿದಿರೆ : ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆಯ ಮೂಡುಬಿದಿರೆ ತಾಲೂಕಿನ ಕೊಡಂಗಲ್ಲು ಒಕ್ಕೂಟದ ಮೈತ್ರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವವು ಭಾನುವಾರ ಶ್ರೀ ಮಹಾವೀರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಸುನೀತಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶಿಕ್ಷಕಿ ಮಮತ ಅವರು ಮಾತನಾಡಿ ಹೆಣ್ಣು ಮಕ್ಕಳಿಗೆ ಸಮಾನ ಶಿಕ್ಷಣ ವನ್ನು ನೀಡುವುದಲ್ಲದೆ ಅವರಲ್ಲಿ ಉತ್ತಮ ಸಂಸ್ಕಾರ ಸಂಸ್ಕೃತಿಯನ್ನು ಬೆಳೆಸಿ ಎಂದರು.
ಒಕ್ಕೂಟದ ಅಧ್ಯಕ್ಷೆ ಬೇಬಿ ಅಧ್ಯಕ್ಷತೆ ವಹಿಸಿದ್ದರು.
ಮಹಾವೀರ ಕಾಲೇಜಿನ ಉಪನ್ಯಾಸಕಿ ವಿಜಯಲಕ್ಷ್ಮಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಿದರು.
ಪುರಸಭಾ ಸದಸ್ಯ ನವೀನ್ ಶೆಟ್ಟಿ, ವಲಯ ಮೇಲ್ವೀಚಾರಕ ವಿಠಲ್ , ಶೀನ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷ ಹರೀಶ್ ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಮಮತಾ ಸ್ವಾಗತಿಸಿದರು. ತಾಲೂಕಿನ ಸಮನ್ವಯಧಿಕಾರಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು. ಕೇಂದ್ರದ ಸದಸ್ಯೆ ಪುಷ್ಪ ಲತಾ ಪ್ರಾರ್ಥಿಸಿದರು. ಪುಷ್ಪ ವಂದಿಸಿದರು.
ನಂತರ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
0 Comments