ಉಡುಪಿಯಲ್ಲಿ ವಿದ್ಯಾರ್ಥಿನಿಯರಿಂದ ವೀಡಿಯೋ ರೆಕಾರ್ಡ್ ಪ್ರಕರಣ:ಬೃಹತ್ ಪ್ರತಿಭಟನೆಗೆ ಉಡುಪಿ ನಗರ ಸಿದ್ಧತೆ
ಉಡುಪಿಯ ನಗರದ ಖಾಸಗಿ ಕಾಲೇಜಿನಲ್ಲಿ ಜಿಹಾದಿ ಮನಸ್ಥಿತಿಯ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ನಾಳೆ ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ 'ಬೃಹತ್ ಪ್ರತಿಭಟನೆ' ಮತ್ತು 'ಸಮಗ್ರ ತನಿಖೆಗೆ ಹಕ್ಕೊತ್ತಾಯ' ನಡೆಯಲಿದೆ. ಇದರ ಪೂರ್ವಭಾವಿಯಾಗಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ರವರ ಅಧ್ಯಕ್ಷತೆಯಲ್ಲಿ ನಗರ ಬಿಜೆಪಿ ಕಛೇರಿಯಲ್ಲಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ನಗರ ಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜು ಕೊಳ, ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ, ಬಡಾನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ ತಿಂಗಳಾಯ, ನಗರ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್ ಮತ್ತು ದಿನೇಶ್ ಅಮೀನ್ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
0 Comments