Breaking:ಕೊನೆಗೂ ಆಕ್ರೋಶಕ್ಕೆ ಮಣಿದ ಪೊಲೀಸ್ ಇಲಾಖೆ: ಉಡುಪಿ ವೀಡಿಯೋ ಗರ್ಲ್ಲ್ಸ್ ವಿರುದ್ಧ ಕೇಸ್

ಜಾಹೀರಾತು/Advertisment
ಜಾಹೀರಾತು/Advertisment

 Breaking:ಕೊನೆಗೂ ಆಕ್ರೋಶಕ್ಕೆ ಮಣಿದ ಪೊಲೀಸ್ ಇಲಾಖೆ: ಉಡುಪಿ ವೀಡಿಯೋ ಗರ್ಲ್ಲ್ಸ್ ವಿರುದ್ಧ ಕೇಸ್




ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಕೊನೆಗೂ ಪ್ರಕರಣ ದಾಖಲಾಗಿದೆ.


ಬಿಜೆಪಿ ಹಾಗೂ ಹಿಂದೂ ನಾಯಕರ ಆಕ್ರೋಶಕ್ಕೆ ಮಣಿದ ಪೊಲಿಸ್ ಇಲಾಖೆ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಿದೆ.


ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ, ಅಲೀಮಾ ಈ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ, ಮಾಹಿತಿಯನ್ನು ಮತ್ತು ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯದ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಆರೋಪಿಗಳ ವಿರುದ್ದ ಭಾರತೀಯ ದಂಡ ಸಂಹಿತೆ 509, 204, 175,34, ಮತ್ತು 66(ಇ) ಅಡಿ ದೂರು ದಾಖಲಾಗಿದೆ.

Post a Comment

0 Comments