18-19ರಂದು ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ "ಪ್ರೋವಿನಿಯೋ-23"

ಜಾಹೀರಾತು/Advertisment
ಜಾಹೀರಾತು/Advertisment

 ಆ.18-19ರಂದು ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ "ಪ್ರೋವಿನಿಯೋ-23"



ಮೂಡುಬಿದಿರೆ: ಅಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವತಿಯಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ  "ಪ್ರೋವಿನಿಯೊ-23"  ಎಂಬ ಶೀರ್ಷಿಕೆಯಡಿ  ಆ. 18-19 ರಂದು ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನವು ನಡೆಯಲಿದೆ ಎಂದು ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ರೋಶನ್ ಪಿಂಟೋ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.


ಹೋಮಿಯೋಪಥಿ ಬಗೆಗಿನ ಜ್ಞಾನಾರ್ಜನೆಯು ಈ ಸಮ್ಮೇಳನದ ಮುಖ್ಯ ಉದ್ದೇಶವಾಗಿದ್ದು, ಈ ಸಮ್ಮೇಳನದಲ್ಲಿ ದೇಶದ ಅನೇಕ  ರಾಜ್ಯಗಳಿಂದ (ಪ್ರಮುಖವಾಗಿ ಕೇರಳ, ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಆಂಧ್ರಪ್ರದೇಶ) ಹೊ ವಿದ್ಯಾರ್ಥಿಗಳು ಹಾಗೂ ವೈದ್ಯರು ಸಾವಿರ ಸಂಖ್ಯೆಯಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ.


ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ  ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್,  ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್ ನ ನಿರ್ದೇಶಕ ರೆ/ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ, ಯೆನೆಪೋಯಾ ವಿಶ್ವವಿದ್ಯಾನಿಲಯ ಮೊಹಮ್ಮದ್ ಫರ್ಹಾದ್, ಪ್ರೊ ಚಾನ್ಸಲರ್ ಮೊಹಮ್ಮದ್ ಫರ್ಹಾದ್,

ದ.ಕ ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್ ಕೆ. ಭಾಗವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಢಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. 


ಸಮ್ಮೇಳನದಲ್ಲಿ ಸರ್ಕಾರಿ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಬೆಂಗಳೂರು ಇದರ ಪ್ರಾಧ್ಯಾಪಕ ಡಾ.ವಿಜಯ ಕೃಷ್ಣ ವಿ ಇವರು ಮಾನವನ ಅನೇಕ ರೋಗಗಳ ಸವಾಲುಗಳನ್ನು ಹಾಗೂ  ಹೋಮಿಯೋಪಥಿ ಚಿಕಿತ್ಸಾ ವಿಧಾನಗಳ ಬಗ್ಗೆ ಮಾತನಾಡಲಿದ್ದಾರೆ.


ಮಹಾರಾಷ್ಟ್ರದ ವಿರರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ. ರವಿ ಡಾಕ್ಟರ್,  ಇವರು ಆಂಕೋಲಜಿಯಲ್ಲಿ  ಹೋಮಿಯೋಪಥಿ ನಿರ್ವಹಣೆ - ಸಾಕ್ಷ್ಯ ಆಧಾರಿತ ಅಭ್ಯಾಸ ಇದರ ಕುರಿತು ಮಾತನಾಡಲಿದ್ದಾರೆ 


ಪಶುವೈದ್ಯರಾದ ಡಾ.ಪಿ ಮನೋಹರ್ ಉಪಾಧ್ಯರವರು ಸಾಕು ಪ್ರಾಣಿಗಳಿಗೆ ಹೋಮಿಯೋಪಥಿ ಚಿಕಿತ್ಸೆಯ ಉಪಯೋಗದ ಕುರಿತು ಪ್ರಸ್ತಾಪಿಸಲಿದ್ದಾರೆ.


ಒಟ್ಟು ೩೦ ವೈದ್ಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಿಬ್ಬಂದಿಗಳು ಮಾಡಿರುವ ಸಂಶೋಧನೆಗಳನ್ನು ಪ್ರಸ್ತುತ ಳನವು ಸದಾವಕಾಶವನ್ನು ನೀಡಿ ಹೋಮಿಯೋಪಥಿ ವೈದ್ಯ ಪದ್ಧತಿಯಲ್ಲಿನ ಸಂಶೋಧನೆಯ ಮಹತ್ವವನ್ನು ತೋರ್ಪಡಿಸಲಿದೆ.


ಸಮ್ಮೇಳನವು ಕೇವಲ ಶೈಕ್ಷಣಿಕ ವಿಷಯಕ್ಕೆ ಮಾತ್ರ ಸೀಮಿತವಾಗದೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಒಳಗೊಂಡಿರುತ್ತದೆ.

ದೇಶದ ನಾನಾ ಭಾಗಗಳಿಂದ ಆಗಮಿಸಿರುವ ವೈದ್ಯರುಗಳಿಗೆ ತಮ್ಮ ವಿಚಾರಧಾರೆಗಳನ್ನು ಹಾಗೂ ವೈದ್ಯಕೀಯ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳಲು ವೇದಿಕೆ ಸುವರ್ಣ ಅವಕಾಶವನ್ನು ಕಲ್ಪಿಸಲಿದೆ ಎಂದರು.

ಸಮ್ಮೇಳನದ ಸಂಯೋಜಕಿ ಡಾ.ಮೋನಿಕಾ ಲೋಬೋ ಮತ್ತು ಪ್ರಾಧ್ಯಾಪಕ ಡಾ.ಪ್ರಶಾಂತ್ ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Post a Comment

0 Comments