ಪ್ರೊವಿನಿಯೋ -2023 ಸಮಾರೋಪ
ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿ
ಮೆಡಿಕಲ್ ಕಾಲೇಜಿನ ವತಿಯಿಂದ ಇಲ್ಲಿನ ಭಾರತ್ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ನಡೆದ ಪ್ರೋವಿನಿಯೋ - 2023 ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸರಿಯಾದ ವಿಷಯವನ್ನು ನೋಡುವ ಮತ್ತು ಉತ್ತಮ ಪ್ರೇಕ್ಷಕ ವರ್ಗವನ್ನು ಬೆಳೆಸುವ ಸಂಸ್ಕೃತಿ ನಮ್ಮದಾಗಬೇಕು. ಹೋಮಿಯೋಪಥಿ ವೈದ್ಯಕೀಯ ಪದ್ಧತಿಯನ್ನು ಅಭಿವೃದ್ಧಿಪಡಿಸಲು ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಳ್ಳುವುದು ಮತ್ತು ಅನುಭವದೊಂದಿಗೆ ಕೆಲಸ ಮಾಡುವುದು ಬಹಳ ಮುಖ್ಯ. ಈ ಮೂಲಕ ಸಮಾಜಕ್ಕೆ ಉತ್ತಮ ಮಾದರಿಗಳಾಗಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಸಂಶೋಧನಾ ಪ್ರಬಂಧಗಳಿಗೆ ಬಹುಮಾನ ವಿತರಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಸರಕಾರಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಡಾ. ವಿಜಯ್ ಕೃಷ್ಣ, ಮುಂಬೈನ ವಿರರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಡಾ. ರವಿ ಡಾಕ್ಟರ್ ಹಾಗೂ ಪಶುವೈದ್ಯ ಡಾ. ಪಿ ಮನೋಹರ್ ಉಪಾಧ್ಯ ಅವರಿಂದ ಹೋಮಿಯೋಪಥಿ ಚಿಕಿತ್ಸಾ ಪದ್ಧತಿಯ ಸವಾಲು ಹಾಗೂ ಪರಿಹಾರಗಳ ಕುರಿತು ಸಂವಾದ ನಡೆಯಿತು.s
ಕಾಲೇಜಿನ ಉಪ ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ, ಡಾ. ಪ್ರವೀಣ್ ರಾಜ್ ಆಳ್ವ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ರೋಷನ್ ಪಿಂಟೋ ಸ್ವಾಗತಿಸಿದರು, ಕಾರ್ಯಕ್ರಮ ಸಂಯೋಜಕಿ ಡಾ. ಮೋನಿಕಾ ಲೋಬೊ ವಂದಿಸಿದರು. ವಿದ್ಯಾರ್ಥಿನಿ ಆರಾಧನಾ ನಿರೂಪಿಸಿದರು..
0 Comments