ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ `ಸಾವಿಷ್ಕಾರದಿಂದ ವೈ-20 ಟಾಕ್ಸ್' ಕಾರ್ಯಕ್ರಮ

ಜಾಹೀರಾತು/Advertisment
ಜಾಹೀರಾತು/Advertisment

 ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ `ಸಾವಿಷ್ಕಾರದಿಂದ ವೈ-20 ಟಾಕ್ಸ್' ಕಾರ್ಯಕ್ರಮ



ಮೂಡುಬಿದಿರೆ: ಸಾಮಾಜಿಕ ಚಟುವಟಿಕೆಗಳಲ್ಲಿ ಯುವಜನತೆಯ ಸಹಭಾಗಿತ್ವವನ್ನು ಪ್ರಜಾಸತ್ತಾತ್ಮಕಗೊಳಿಸುವುದು ವೈ-20 ಆದ್ಯತೆ ಎಂದು ಕೇಂದ್ರ ಯುವ ವ್ಯವಹಾರ ಹಾಗೂ ಕ್ರೀಡಾ ಮಂತ್ರಾಲಯ ಅಧೀನದ ನೆಹರೂ ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಯಶವಂತ ಯಾದವ್ ಹೇಳಿದರು. 



ಸಾವಿಷ್ಕಾರ ಸಹಯೋಗದಲ್ಲಿ ಮಿಜಾರಿನ ಶೋಭಾವನದಲ್ಲಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವಿಷಯ ಕುರಿತು  ನಡೆದ ವೈ-20 ಟಾಕ್ಸ್ (ವೈ-20 ಮಾತುಕತೆ) ನ್ನು ಉದ್ಘಾಟಿಸಿ ಮಾತನಾಡಿದರು. 

ವೈ-20 ಇಂಡಿಯಾ (ಸಂವಹನ) ಕಾರ್ಯದರ್ಶಿ ಆರ್ಯಾ ಝಾ ಮಾತನಾಡಿ, ಮೊಬೈಲ್ ಮೂಲಕ ತಂತ್ರಜ್ಞಾನ ಬಳಕೆಯೂ ಹೆಚ್ಚಾಗಿದ್ದು, ಸೈಬರ್ ಸುರಕ್ಷತೆಯು ಇಂದಿನ ಸವಾಲಾಗಿದೆ. ಈ ಸವಾಲು ಹಲವರಿಗೆ ಅವಕಾಶಗಳನ್ನೂ ಸೃಷ್ಟಿಸಿವೆ. ಸಮಸ್ಯೆ ಮತ್ತು ಸವಾಲುಗಳಿಗೆ ಪರಿಹಾರ ಕಂಡುಹಿಡಿಯುವಲ್ಲಿ ಯುವಜನತೆ ಪಾತ್ರ ಹೆಚ್ಚಬೇಕು ಎಂದರು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೆಕ್ ಆಳ್ವ ಮಾತನಾಡಿ, ಪ್ರತಿ ಕಾಲೇಜುಗಳಲ್ಲಿಯೂ ಸೈಬರ್ ಸುರಕ್ಷತಾ ಘಟಕ ಸ್ಥಾಪಿಸಬೇಕು ಎಂದರು. 

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್, ಸಾವಿಷ್ಕಾರದ ವಿಭಾಗೀಯ ಸಂಯೋಜಕ ನಿಶಾನ್ ಆಳ್ವ, ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಅನಂತಪ್ರಭು ಜಿ.,ಮಾಹಿತಿ ಸುರಕ್ಷತೆಯ ಪರಿಶೋಧಕ ಸಂದೇಶ ಎಚ್.ಎನ್., ಸೈಬರ್ ಹ್ಯಾಕಿಂಗ್ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದ ರಿಇನ್‌ಪೊಸೆಕ್ ತಾಂತ್ರಿಕ ನಿರ್ದೇಶಕ ಸಮರ್ಥ ಭಾಸ್ಕರ ಭಟ್, ಕಾರ್ಯಕ್ರಮದ ಸಂಯೋಜಕರಾದ ನಿಶ್ಚಿತ್ ಬಂಟ್ವಾಳ್, ಆಕಾಶ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್‌ಕುಮಾರ್ ನಾಯ್ಕ ಉಪಸ್ಥಿತರಿದ್ದರು.

ಕಾಲೇಜಿನ ಡೀನ್ ಡಾ.ದಿವಕರ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿನಿ ಆಯನಾ ನಿರೂಪಿಸಿದರು. ಸಾವಿಷ್ಕಾರ ಸಲಹಾ ಮಂಡಳಿಯ ಡಾ.ಜ್ಞಾನಿ ವಂದಿಸಿದರು. 

ಸಮಾರೋಪದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಚಿಕ್ಕಬಳ್ಳಾಪುರ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಶಿವಮೂರ್ತಿ, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಉಉಪಸ್ಥಿತರಿದ್ದರು. 

 ವಿವಿಧ ಕಾಲೇಜುಗಳ 550ಕ್ಕೂ ಅಧಿಕ ಮಂದಿ ವಿದ್ಯಾಥಿಗಳು ಭಾಗವಹಿಸಿದರು.

Post a Comment

0 Comments