ಆ.24: ನಮನ ಸೌಹಾರ್ದ ಸಹಕಾರಿ(ನಿ) ಉದ್ಘಾಟನೆ
ಮೂಡುಬಿದಿರೆ: ನೂತನವಾಗಿ ಅಸ್ವಿತ್ವಕ್ಕೆ ಬಂದಿರುವ ನಮನ ಸೌಹಾರ್ದ ಸಹಕಾರಿ (ನಿ.)ವು ಆ.24 ರಂದು ಸಂಜೆ 4 ಗಂಟೆಗೆ ಮೂಡುಬಿದಿರೆ ಸಮಾಜ ಮಂದಿರ ಸಭಾದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಮುಖ್ಯ ಪ್ರವರ್ತಕರಾದ ಎಂ. ದೇವಾನಂದ ಭಟ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
15 ಮಂದಿ ನಿರ್ದೇಶಕರನ್ನೊಳಗೊಂಡ ಈ ಸಹಕಾರಿ ಸಂಘದ ಕಚೇರಿ ಮೂಡುಬಿದಿರೆಯ ಪ್ರಭು ಕಾಂಪ್ಲೆಕ್ಸ್ ನಲ್ಲಿದ್ದು ನಮನ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಇದಾಗಿದೆ ಎಂದರು.
ಸಂಘದ ಅಧ್ಯಕ್ಷ, ಕರ್ಣಾಟಕ ಬ್ಯಾಂಕ್ ನ ನಿವೃತ್ತ ಮುಖ್ಯ ಪ್ರಬಂಧಕರಾಗಿರುವ ಬಿ.ಚಂದ್ರಶೇಖರ ರಾವ್ ಅವರು ಮಾತನಾಡಿ ಮೂಡುಬಿದಿರೆ ಜೈನಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಆಶೀ ರ್ವಚನ ನೀಡಲಿದ್ದು ಶ್ರೀ ಕ್ಷೇತ್ರ ಹೊರನಾಡು ಶ್ರೀ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತ ರಾದ ಭೀಮೇಶ್ವರ ಜೋಶಿ ಅವರು ಉದ್ಘಾಟಿಸಲಿದ್ದಾರೆ. ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಅಧ್ಯಕ್ಷತೆ ವಹಿಸಲಿದ್ದು ಪುತ್ತಿಗೆ ಶ್ರೀ ಮಹತೋಭಾರ ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಅಡಿಗಳ್ ಅನಂತಕೃಷ್ಣ ಭಟ್,ಶ್ರೀ ವೆಂಕಟರಮಣ, ಶ್ರೀ ಹನುಮಂತ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಿ. ಉಮೇಶ್ ಪೈ, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಎ.ಸುರೇಶ್ ರೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹಾಗೂ ಸಂಘದ ಸೌಲಭ್ಯಗಳ ಬಗ್ಗೆ ಅವರು ಮಾಹಿತಿ ನೀಡಿದರು.
ನಿರ್ದೇಶಕರಾದ ರಾಘವೇಂದ್ರ ಹೆಬ್ಬಾರ್ ಪತ್ರಿಕಾಗೋಷ್ಠಿ ಯಲ್ಲಿದ್ದರು.
0 Comments