ನಾಳೆ (ಆ.6)ಮೂಡುಬಿದಿರೆಯಲ್ಲಿ ಬಂಟರ ಮಹಿಳಾ ಘಟಕದಿಂದ "ಆಟಿಡೊಂಜಿ ದಿನ"
ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ(ರಿ). ಬಂಟರ ಮಹಿಳಾ ಘಟಕ ಮೂಡುಬಿದಿರೆ ಇದರ ಸಹಯೋಗದಲ್ಲಿ ಆ.6 ಭಾನುವಾರದಂದು ಕನ್ನಡ ಭವನದಲ್ಲಿ "ಆಟಿಡೊಂಜಿ ದಿನ" ಕಾರ್ಯಕ್ರಮವು ನಡೆಯಲಿದೆ.
ಮೂಡುಬಿದಿರೆ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್.ಹೆಗ್ಡೆ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಈ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಮಂಗಳೂರು ಬಂಟರ ಮಾತೃ ಸಂಘದ ಎಕ್ಸಿಕ್ಯೂಟಿವ್ ಕಮಿಟಿ ಮೆಂಬರ್ ಸಬಿತಾ ಶೆಟ್ಟಿ, ಮೂಡುಬಿದಿರೆ ಬಂಟರ ಮಹಿಳಾ ಘಟಕದ ಗೌರವಾಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಮೂಡುಬಿದಿರೆ ಬಂಟರ ಸಂಘದ ಕಾರ್ಯದರ್ಶಿ ಮೇಘನಾಥ ಶೆಟ್ಟಿ, ಕೋಶಾಧಿಕಾರಿ ಎಂ.ಪುರುಷೋತ್ತಮ ಶೆಟ್ಟಿ, ಯುವ ಬಂಟರ ಸಂಘದ ಅಧ್ಯಕ್ಷ ಜಯಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಡಾ.ಸುಧಾರಾಣಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಸನ್ಮಾನ ಮತ್ತು ಸಹಾಯಧನ ವಿತರಣೆಯು ನಡೆಯಲಿದೆ.
ಸಭಾ ಕಾರ್ಯಕ್ರಮದ ಮೊದಲು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ.
0 Comments