ಶಿಕ್ಷಕರಿಗೆ ಗೌರವ ಸಮರ್ಪಣಾ ಕಾರ್ಯಕ್ರಮ
ಕಿಲೆಂಜಾರು ಅರಮನೆ ಸರಕಾರಿ ಪ್ರೌಢಶಾಲೆ ಕುಪ್ಪೆಪದವು ಇಲ್ಲಿ ಇತ್ತೀಚೆಗೆ ವರ್ಗಾವಣೆಗೊಂಡ ಸಂಸ್ಥೆಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಹರಿಶ್ಚಂದ್ರ ಗೌಡ , ಮುಖ್ಯ ಅತಿಥಿಗಳಾಗಿ ಕುಪ್ಪೆಪದವು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಡಿ.ಪಿ. ಹಮ್ಮಬ್ಬ, ಎಸ್.ಡಿ.ಎಂ.ಸಿ ಸದಸ್ಯರಾದ ಶ್ರೀ ಶೇಖ್ ಅಬ್ದುಲ್ಲಾ, ಶ್ರೀ ಶಶಿಧರ್ ಶೆಟ್ಟಿ. ವರ್ಗಾವಣೆಗೊಂಡ ಶಿಕ್ಷಕರಾದ ಶ್ರೀಮತಿ ನಳಿನಾಕ್ಷಿ, ಶ್ರೀ ಬಾಲಚಂದ್ರ ಆಚಾರಿ, ಶ್ರೀಮತಿ ಶೆರೀನ್ ಪ್ರಿಯಾ ಕ್ಯಾಸ್ತೆಲಿನೊ ಮತ್ತು
ಮುಖ್ಯ ಶಿಕ್ಷಕರಾದ ಶ್ರೀ ಮಾರ್ಕ್ ಜೆ.ಮೆಂಡೊನ್ಸಾ, ಸಹಶಿಕ್ಷಕರಾದ ಶ್ರೀಮತಿ ವಿಮಲಾ ಶೆಟ್ಟಿ, ಶ್ರೀಮತಿ ತುಳಸಿ, ಶ್ರೀಮತಿ ಕಮಲಾ ಹಾಗೂ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
0 Comments