ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಆ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದುರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಪ್ರತಿಭಟನೆ ನಡೆಸಿದ ಮರುದಿನವೇ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮರು ತನಿಖೆಗೆ ಒತ್ತಾಯಿಸಲಾಗುವುದು ಎಂದು ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ರಾಜಕೀಯ ಪಕ್ಷವೊಂದು ಅಧಿಕೃತವಾಗಿ ಸೌಜನ್ಯ ಪರ ಹೋರಾಟಕ್ಕೆ ಮುಂದಡಿಯಿಡಯತ್ತಿರುವುದು ಇದೇ ಮೊದಲು ಎನ್ನಲಾಗಿದ್ದು ಬಿಜೆಪಿ ಈಗ ಮರು ತನಿಖೆಗೆ ಒತ್ತಾಯಿಸಿ ಹೋರಾಟ ನಡೆಸಲು ಮುಂದಾಗಿದೆ.
0 Comments