ನೆಲ್ಲಿಕಾರು ಸರಕಾರಿ ಪ್ರೌಢಶಾಲೆಯಲ್ಲಿ ಗ್ರಾಹಕ ಮಾಹಿತಿ ಕಾರ್ಯಕ್ರಮ
ಮೂಡುಬಿದಿರೆ ತಾಲೂಕು ನೆಲ್ಲಿಕಾರು ಸರಕಾರಿ ಪ್ರೌಢಶಾಲೆಯಲ್ಲಿ ಸಪ್ಟೆಂಬರ್ 31 ರಂದು ಗ್ರಾಹಕ ಮಾಹಿತಿ ಕಾರ್ಯಕ್ರಮ ನಡೆಯಿತು. ರಾಜ್ಯ ಗ್ರಾಹಕ ಕ್ರಿಯೇಟ್ ಸಂಸ್ಥೆಯ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ರಾಜ್ಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ, ಮೂಡುಬಿದಿರೆ ಯವರು ಮಾಹಿತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಮಾಹಿತಿ ಕಾರ್ಯಕ್ರಮದಲ್ಲಿ ಗ್ರಾಹಕರ ಬಗೆಗೆ ಸಂಪೂರ್ಣ ವಿವರವನ್ನು ನೀಡಿದರು. ಗ್ರಾಹಕ ತನ್ನ ಹಕ್ಕುಗಳನ್ನು ಜಾರಿಗೆ ತರಲು ವಹಿಸಬೇಕಾದ ಮೂಲ ಅಂಶಗಳ ಮಾಹಿತಿಯನ್ನು ನೀಡುತ್ತಾ ದಾಖಲೀಕರಣ ಹೇಗೆ ಉಪಯೋಗಕರವಾಗುತ್ತದೆ ಎನ್ನುವುದನ್ನು ಹಲವಾರು ಉದಾಹರಣೆಗಳ ಮೂಲಕ ತಿಳಿಸಿಕೊಟ್ಟರು. ಗ್ರಾಹಕ ಹಿತ ರಕ್ಷಣಾ ಕಾಯಿದೆಯ ಕಾನೂನು ಅಂಶಗಳ ಸವಿವರವನ್ನು ನೀಡಿ ಅದನ್ನು ಜಾರಿಗೊಳಿಸಲು ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದಲ್ಲಿರುವ ಗ್ರಾಹಕ ಫೋರಂ ನ ರಚನೆಯ ಅಂಶಗಳನ್ನು ಕೂಡ ತಿಳಿಸಿಕೊಟ್ಟರು.
ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶಕುಂತಲಾ ಅಧ್ಯಕ್ಷತೆ ವಹಿಸಿದ್ದರು. ಅಧ್ಯಾಪಕ ಭೈರವೇಶ್ವರ ಭಟ್ ಅವರು ಸ್ವಾಗತಿಸಿ ವಂದಿಸಿದರು. ಶಾಲಾ ಗ್ರಾಹಕ ಕ್ಲಬ್ ನ ಸಂಚಾಲಕ ಶಿವಾನಂದ ಕಾಯ್ಕಿಣಿ ಕಾರ್ಯಕ್ರಮ ಸಂಯೋಜಿಸಿದ್ದರು. ಶಾಲೆಯ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.
0 Comments