ಶಾಸಕ ಉಮಾನಾಥ್ ಕೋಟ್ಯಾನ್ ಬೆನ್ನಿಗೆ ನಿಂತ ನಳಿನ್, ಕೋಟ ಹಾಗೂ ಜಿಲ್ಲೆಯ ಬಿಜೆಪಿ ಶಾಸಕರು:ಡಿ.ಸಿ.ಗೆ ಪ್ರಶ್ನೆಯ ಸುರಿಮಳೆ

ಜಾಹೀರಾತು/Advertisment
ಜಾಹೀರಾತು/Advertisment

 ಶಾಸಕ ಉಮಾನಾಥ್ ಕೋಟ್ಯಾನ್ ಬೆನ್ನಿಗೆ ನಿಂತ ನಳಿನ್, ಕೋಟ ಹಾಗೂ ಜಿಲ್ಲೆಯ ಬಿಜೆಪಿ ಶಾಸಕರು:ಡಿ.ಸಿ.ಗೆ ಪ್ರಶ್ನೆಯ ಸುರಿಮಳೆ




ಮೂಡುಬಿದಿರೆ ಮುಲ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಇರುವೈಲು ಗ್ರಾಮ ಪಂಚಾಯತಿ ಕಾರ್ಯಾಲಯ ಉದ್ಘಾಟನೆ ಹಾಗೂ ಹಳೆಯಂಗಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದ ವಿಚಾರದಲ್ಲಿ ಕಾಂಗ್ರೆಸ್ ನಡೆಸಿದ ಹಸ್ತಕ್ಷೇಪ, ಅಹಿತಕರ ವರ್ತನೆ ವಿರುದ್ಧ ಜಿಲ್ಲೆಯ ಸಂಸದರು ಹಾಗೂ ಶಾಸಕರು ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಧರಣಿ ನಿರತರಾಗಿದ್ದಾರೆ.


ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ಸಂಸದ ನಳಿನ್ ಕುಮಾರ್ ಕಟೀಲು ಪ್ರಶ್ನೆಯ ಸುರಿಮಳೆಗೈದಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಹೇಳಿರುವ ಹೇಳಿಕೆಯ ಪರವಾಗಿ ತಾವು ಕಾರ್ಯಚರಣೆ ನಡೆಸುತ್ತಿರುವ ವಿಚಾರವನ್ನು ಖಂಡಿಸಿದರು.


ಈ ಬಗ್ಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು ತಾನು ಯಾವುದೇ ವಿಚಾರವಾಗಿ ಹಸ್ತಕ್ಷೇಪ ಮಾಡಿಲ್ಲ. ಎಲ್ಲವೂ ಪಾರದರ್ಶಕವಾಗಿದೆ. ಈ ಸಂಬಂಧ ಲೋಪಗಳಿದ್ದಲ್ಲಿ ಸರಿಪಡಿಸುತ್ತೇವೆ ಎಂದು ಸಮರ್ಥನೆ ನೀಡಿದರು. ಆದರೆ ಡಿಸಿ ಸಮರ್ಥನೆಗೆ ಕಿಡಿಕಾರಿದ ಶಾಸಕ ಉಮಾನಾಥ್ ಕೋಟ್ಯಾನ್ ಮೂಡುಬಿದಿರೆಯಲ್ಲಿ ತಮ್ಮದೇ ನಿಯಮದ ಅನ್ವಯ ಗ್ರಾಮ ಪಂಚಾಯತಿ ಉದ್ಘಾಟನೆಗೆ ದಿನ ನಿಗದಿ ಮಾಡಿದ್ದರೂ ನೀವೇ ತಡೆಯುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.


ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Post a Comment

0 Comments