ರಾಜ್ಯ ಪೊಲೀಸ್ ಇಲಾಖೆಯ ನಡೆಯನ್ನು ಖಂಡಿಸಿ ಹಿಂಜಾವೇ ಯಿಂದ ಬಿ.ಸಿರೋಡಿನಲ್ಲಿ ಪ್ರತಿಭಟನೆ
ಮೂಡುಬಿದಿರೆ: ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳಿಂದ ಗೌರಿಬಿದನೂರಿನಲ್ಲಿ ಅಖಂಡ ಸಂಕಲ್ಪ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯತೆಯ ಭಾಷಣ ಮಾಡಿದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೊಜಕ್ ಸತೀಶ್ ದಾವಣಗೆರೆ ಇವರನ್ನು ಮಧ್ಯ ರಾತ್ರಿ ಮನೆಗೆ ನುಗ್ಗಿ ಬಂಧಿಸಿದ ಪೋಲೀಸ್ ಇಲಾಖೆಯ ನಡೆಯನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ ಮಂಗಳೂರು ಜಿಲ್ಲೆ ವತಿಯಿಂದ ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂಧರ್ಭದಲ್ಲಿ ಹಿಂ.ಜಾ ವೇ ಜಿಲ್ಲಾ ಸಂಯೋಜಕರಾದ ನರಸಿಂಹ ಮಾಣಿ ಮತ್ತು ರಾಮದಾಸ್ ಬಂಟ್ವಾಳ ಮಾತನಾಡಿದರು.
ಪ್ರಮುಖರಾದ ರವಿರಾಜ್ ಬಿ.ಸಿರೋಡ್, ರತ್ನಾಕರ ಶೆಟ್ಟಿ, ಮಂಗಳೂರು ಮಹಾನಗರ ಜಿಲ್ಲಾ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ಪ್ರಮುಖರಾದ ಸಮಿತ್ ರಾಜ್ ದರೆಗುಡ್ಡೆ , ಪ್ರಕಾಶ್ ಕುಂಪಲ, ಅರುಣ್ ಸಜೀಪ, ಗಣೇಶ್ ಕೆದಿಲ, ಬಾಲಕೃಷ್ಣ ಕಲಾಯಿ, ರವಿ ಕೆಂಪು ಗುಡ್ಡೆ ತಾಲೂಕು ಕಾರ್ಯಕರ್ತರು ಮತ್ತು ಪರಿವಾರದ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.*
0 Comments