ಅಮಾಯಕ ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗುವಂತೆ ಮತ್ತು ಶ್ರೀ ಕ್ಷೇತ್ರಕ್ಕೆ, ಧರ್ಮಾಧಿಕಾರಿ ವಿರುದ್ಧ ವೃಥಾರೋಪವನ್ನು ಖಂಡಿಸಿ ಉಜಿರೆಯಲ್ಲಿ ಸಮಾವೇಶ
ಮೂಡುಬಿದಿರೆ: ಕಳೆದ 11 ವರ್ಷಗಳ ಹಿಂದೆ ಧರ್ಮಸ್ಥಳ ಸಮೀಪದ ನಿವಾಸಿ ಪಾಂಗಳದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಹತ್ಯೆ ಮಾಡಿದ ನೈಜ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವ ಕುರಿತಂತೆ ಹಕ್ಕೊತ್ತಾಯ ಮತ್ತು ಪ್ರಕರಣ ಮುಂದಿಟ್ಟು ಧರ್ಮಸ್ಥಳ ಕ್ಷೇತ್ರದ ಮೇಲೆ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲೆ ವೃಥಾರೋಪಗಳಿಂದ ನೊಂದಿರುವ ಆಕ್ರೋಶಿತ ಬಂಧುಗಳು, ನಾಡಿನ ಲಕ್ಷಾಂತರ ಭಕ್ತರು ಸೇರಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ವತಿಯಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಂಭಾಗ ಶುಕ್ರವಾರ ಬೃಹತ್ ಸಮಾವೇಶ ನಡೆಯಿತು.
ಪ್ರಕರಣ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅವಹೇಳನ ವಿಚಾರ ಪ್ರತಿಭಟನಾ ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗದ ಭಕ್ತರು ಆಗಮಿಸಿ ಮಳೆಯ ಮಧ್ಯೆಯೇ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೈಕಾರ ಕೂಗುತ್ತ ಸೌಜನ್ಯಳಿಗೆ ನ್ಯಾಯ ಒದಗಿಸಬೇಕೆಂದು ಹೋರಾಟ ನಡೆಸಿದರು.
ಎಸ್.ಕೆ.ಡಿ.ಆರ್.ಡಿ.ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜಯನಾಥ್, ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಮಾಜಿ ಸಚಿವ ಅಭಯಚಂದ್ರ ಜೈನ್, ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ತಾಲೂಕು ಅಧ್ಯಕ್ಷ ಖಾಸಿಂ ಮಲ್ಲಿಗೆ ಮನೆ, ಮಾಜಿ ಅಧ್ಯಕ್ಷೆ ಶಾರದಾ ರೈ, ತಿಗಳ ಸಮಾಜ ರಾಜ್ಯಾಧ್ಯಕ್ಷ ಜಯರಾಜ್ ಹೊಸಕೋಟೆ, ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಹಿತ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
0 Comments