ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಚಾಲನೆ

ಜಾಹೀರಾತು/Advertisment
ಜಾಹೀರಾತು/Advertisment

 ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಚಾಲನೆ



ಮೂಡುಬಿದಿರೆ: ದ.ಕ.ಜಿ.ಪಂಚಾಯತ್ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮೂಡುಬಿದಿರೆ ಹಾಗೂ ಕಲ್ಲಬೆಟ್ಟು ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಇವುಗಳ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ "ಟೇಬಲ್ ಟೆನ್ನಿಸ್ ಪಂದ್ಯಾಟ-2023" ವು ಶನಿವಾರ ಎಕ್ಸಲೆಂಟ್ ಶಾಲೆಯಲ್ಲಿ ಆರಂಭಗೊಂಡಿತು.



 ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ವಿದ್ಯಾರ್ಥಿಗಳು ಮಾಡುವ ಕೆಲಸಗಳು ವಿಶೇಷವಾಗಿರಬೇಕು.

ಕ್ರೀಡಾಪಟುಗಳು ಆತ್ಮಶಕ್ತಿಯನ್ನು ಕ್ರೋಢೀಕರಿಸಿಕೊಳ್ಳಬೇಕು. ಓದಿನ ಜತೆಗೆ ಕ್ರೀಡೆಯನ್ನು  ಸವಾಲಾಗಿ ತೆಗೆದುಕೊಂಡು ಆತ್ಮವಿಶ್ವಾಸದೊಂದಿಗೆ ಆಡಿದಾಗ ಗೆಲುವು ಸಾಧ್ಯ. 



ನಿಮ್ಮಲ್ಲಿರುವ ಬೇಡದ ಹವ್ಯಾಸಗಳನ್ನು ಬದಲಾವಣೆ ಮಾಡಿಕೊಂಡರೆ ಜೀವನವೇ ಬದಲಾಗುತ್ತದೆ ಎಂದ ಅವರು ವಿದ್ಯಾರ್ಥಿಗಳು ಪ್ರತಿಯೊಬ್ಬರು ದಿನಕ್ಕೆ ಒಂದು ಗಂಟೆಯಾದರೂ ಕ್ರೀಡಾಂಗಣದಲ್ಲಿ ಆಟಗಳನ್ನು ಆಡಬೇಕೆಂಬ ದೃಷ್ಠಿಯಿಂದ ಇಲ್ಲಿ ಅವಕಾಶ ನೀಡಲಾಗುತ್ತಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

 ದ.ಕ.ಜಿಲ್ಲಾ ದೈ.ಶಿ.ಶಿ.ಸಂಘದ ಅಧ್ಯಕ್ಷೆ ಲಿಲ್ಲಿ ಪಾಯಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಎಕ್ಸಲೆಂಟ್ ಸಂಸ್ಥೆಯು ಕ್ರೀಡೆಗೆ ಮತ್ತು ಕ್ರೀಡಾಪಟುಗಳಿಗೆ ನೀಡುತ್ತಿರುವ ಸಹಕಾರ ಅಚಲವಾದುದು ಆದ್ದರಿಂದ ಕ್ರೀಡಾಪಟುಗಳು ಉತ್ತಮವಾಗಿ ಆಡಿ ಎಕ್ಸಲೆಂಟ್ ಮಾದರಿಯಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿ ಎಂದು ಶುಭ ಹಾರೈಸಿದರು.

 ಕ್ಷೇತ್ರ ಸಮನ್ವಯಾಧಿಕಾರಿ ಸೌಮ್ಯ, ದೈ.ಶಿ.ಶಿ.ಸಂಘದ ತಾಲೂಕು ಅಧ್ಯಕ್ಷ ನವೀನ್ ಪುತ್ರನ್,  ದೈ.ಶಿ.ಶಿ.ಸಂಘದ ಕೋಶಾಧಿಕಾರಿ ಶಿವಾನಂದ ಕಾಯ್ಕಿಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

  ಶಾಲಾ ಮುಖ್ಯ ಶಿಕ್ಷಕ ಶಿವಪ್ರಸಾದ್ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕನ್ನಡ ಶಿಕ್ಷಕ ರೇಣುಕಾಚಾರ್ಯ ಕಾರ್ಯಕ್ರಮ ನಿರೂಪಿಸಿದರು. ದೈ.ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ವಂದಿಸಿದರು.



Post a Comment

0 Comments