ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಕಾಯಕಲ್ಪ:ಶಂಕುಸ್ಥಾಪನೆ ಮೋದಿ,ನಳಿನ್
ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಮಂಗಳೂರು ರೈಲ್ವೆ ನಿಲ್ದಾಣದ ಆಧುನೀಕರಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ನೆರವೇರಿಸಿದ್ದರೆ, ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ದೀಪ ಬೆಳಗಿಸುವ ಮೂಲಕ ಶಿಲಾನ್ಯಾಸಗೈದರು.
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ಇಂದು ದೇಶದ 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಿಲಾನ್ಯಾಸ ನೆರವೇರಿದೆ. ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣ ಮರು ನಿರ್ಮಾಣಕ್ಕೆ 19.32 ಕೋಟಿ ಅನುದಾನ ನೀಡಲಾಗಿದೆ.
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಶ್ರೀ ವೇದವ್ಯಾಸ್ ಕಾಮತ್, ಶ್ರೀ ಭರತ್ ಶೆಟ್ಟಿ, ಕು.ಭಾಗೀರತೀ ಮುರುಳ್ಯ,ಶ್ರೀ ಪ್ರತಾಪ್ ಸಿಂಹ ನಾಯಕ್, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
0 Comments