ಸಾಯಿ ಮಾರ್ನಾಡ್ ಸೇವಾ ಸಂಘದಿಂದ ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು
ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಶಾಂತಾ ಟಿ.ಬಾಲನ್ ಎಂಬವರಿಗೆ ಎದೆಯ ಭಾಗದಲ್ಲಿ ಕ್ಯಾನ್ಸರ್ ಕಾಣಿಸಿಕೊಂಡಿದ್ದು ಇದರಿಂದಾಗಿ ಪ್ರತಿ ತಿಂಗಳು ಚಿಕಿತ್ಸೆ ಪಡೆಯಲು ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಹೋಗಬೇಕಾಗಿರುತ್ತದೆ. ಆದರೆ ಆರ್ಥಿಕವಾಗಿ ಅಸಹಾಯಕರಾಗಿರುವ ಅವರಿಗೆ ಚಿಕಿತ್ಸೆಗೆ ಹಣ ಹೊಂದಿಸಲು ಕಷ್ಟ ಸಾಧ್ಯವಾಗಿದ್ದು ಇದನ್ನು ಗಮನಿಸಿರುವ ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ ಅಮನಬೆಟ್ಟು ಇದರ ವತಿಯಿಂದ ರೂ 10,000 ವನ್ನು ಹಸ್ತಾಂತರಿಸಲಾಯಿತು.
ಸೇವಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಈ ಸಂದರ್ಭದಲ್ಲಿದ್ದರು.
0 Comments